alex Certify
ಕನ್ನಡ ದುನಿಯಾ       Mobile App
       

Kannada Duniya

ಧಾರ್ಮಿಕ ಕಾರ್ಯಕ್ರಮದಲ್ಲಿ ಸಹೋದರರಿಬ್ಬರ ಹತ್ಯೆ

ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಇಬ್ಬರು ಸಹೋದರರನ್ನು ಕೊಲೆಗೈದ ಪ್ರಕರಣ ಬೆಳಕಿಗೆ ಬಂದಿದೆ. ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಈ ಘಟನೆ ನಡೆದಿದೆ.

ಮೃತ ವ್ಯಕ್ತಿಯೊಬ್ಬ ಕೆಲ ದಿನಗಳ ಹಿಂದಷ್ಟೇ ಜೈಲಿನಿಂದ ಮನೆಗೆ ಬಂದಿದ್ದ ಎನ್ನಲಾಗಿದೆ. ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಈತನಿಗೆ ಸಾರ್ವಜನಿಕರು ಅನೇಕ ಪ್ರಶ್ನೆಗಳನ್ನು ಕೇಳಿದ್ದಾರೆ. ತಮ್ಮ ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು ಆತ ಹಾಗೂ ಆತನ ಸಹೋದರನನ್ನು ಹೊಡೆದು ಕೊಲೆ ಮಾಡಿದ್ದಾರೆ. ಸ್ಥಳದಲ್ಲಿಯೇ ಸಹೋದರರಿಬ್ಬರು ಸಾವನ್ನಪ್ಪಿದ್ದಾರೆ.

ಕೋಪಗೊಂಡಿದ್ದ ಸಾರ್ವಜನಿಕರು ಮೃತರ ಮನೆಗೆ ಬೆಂಕಿ ಹಚ್ಚಿದ್ದಾರೆ. ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ಶಾಂತಗೊಳಿಸಲು ಹರಸಾಹಸಪಟ್ಟಿದ್ದಾರೆ. ನಂತ್ರ ಎರಡು ಶವಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಬಗ್ಗೆ ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...