alex Certify
ಕನ್ನಡ ದುನಿಯಾ       Mobile App
       

Kannada Duniya

ಇಬ್ಬರು ವಿದ್ಯಾರ್ಥಿನಿಯರ ಮೇಲೆ 5 ಯುವಕರ ಸಾಮೂಹಿಕ ಅತ್ಯಾಚಾರ

ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ಬೆಳಕಿಗೆ ಬಂದಿದೆ. ಲಿಫ್ಟ್ ನೀಡುವುದಾಗಿ ವಿದ್ಯಾರ್ಥಿನಿಯರನ್ನು ಹೊಟೇಲ್ ಗೆ ಕರೆದುಕೊಂಡ ಹೋದ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಪರಾರಿಯಾಗಿದ್ದಾರೆ. ಘಟನೆ ಜೂನ್ 15ರಂದು ನಡೆದಿದೆ. ಜೂನ್ 17ರಂದು ಪೀಡಿತರ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಬಂಧಿತ ಮೂವರು ಆರೋಪಿಗಳು ಪಂಜಾಬ್ ಮೂಲದವರು ಎನ್ನಲಾಗಿದೆ.

ಜೂನ್ 15ರಂದು ಮನಾಲಿಗೆ ಬರ್ತಿದ್ದ ಪೀಡಿತ ವಿದ್ಯಾರ್ಥಿನಿಯರಿಗೆ ಲಿಫ್ಟ್ ನೀಡುವುದಾಗಿ ಕಾರ್ ಹತ್ತಿಸಿಕೊಂಡ ಯುವಕರು ಬೆದರಿಸಿ ಹೊಟೇಲ್ ಗೆ ಕರೆದುಕೊಂಡು ಹೋಗಿದ್ದಾರೆ. ಅತ್ಯಾಚಾರಕ್ಕೊಳಗಾದ ಪೀಡಿತರಲ್ಲಿ ಒಬ್ಬಳು ಅಪ್ರಾಪ್ತೆ ಎಂದು ಪೊಲೀಸರು ಹೇಳಿದ್ದಾರೆ. ವೈದ್ಯಕೀಯ ಪರೀಕ್ಷೆ ವರದಿಯಲ್ಲಿ ದುಷ್ಕೃತ್ಯ ನಡೆದಿರುವುದು ಸಾಬೀತಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...