alex Certify
ಕನ್ನಡ ದುನಿಯಾ       Mobile App
       

Kannada Duniya

ಇಬ್ಬರು ಬಾಲಕಿಯರ ಮೇಲೆರಗಿದ 11 ಮಂದಿ ಅರೆಸ್ಟ್

ಜಾರ್ಖಂಡ್ ನ ಲೋಹರ್ದಾಗಾ ಜಿಲ್ಲೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ 11 ಮಂದಿ ಅತ್ಯಾಚಾರವೆಸಗಿದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸ್ ಉಪ ಅಧೀಕ್ಷಕ ಆಶಿಶ್ ಕುಮಾರ್ ಭಾನುವಾರ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಆಗಸ್ಟ್ 16 ರಂದು ಘಟನೆ ನಡೆದಿದೆ. ಬಾಲಕಿಯರು ಪಕ್ಕದ ಮನೆ ಮಹಿಳೆ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದರಂತೆ. ದಾರಿ ಮಧ್ಯೆ ಬೈಕ್ ಹಾಳಾಗಿದೆ. ಬಾಲಕಿಯೊಬ್ಬಳು ಸ್ನೇಹಿತನಿಗೆ ಕರೆ ಮಾಡಿ ಸಹಾಯ ಕೇಳಿದ್ದಾಳೆ. ಸ್ನೇಹಿತ ಸಹಾಯಕ್ಕೆ ಬದಲು 11 ಮಂದಿಯನ್ನು ಸ್ಥಳಕ್ಕೆ ಕಳುಹಿಸಿದ್ದಾನೆ. ಮಹಿಳೆಗೆ ಹೊಡೆದು ಓಡಿಸಿದ ಪಾಪಿಗಳು ಇಬ್ಬರ ಮೇಲೆ ಅತ್ಯಾಚಾರವೆಸಗಿದ್ದಾರೆ.

ಬಾಲಕಿಯರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ 11 ಮಂದಿ ವಿರುದ್ಧ ದೂರು ದಾಖಲಿಸಿದ್ದರಂತೆ. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...