alex Certify
ಕನ್ನಡ ದುನಿಯಾ       Mobile App
       

Kannada Duniya

ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾರ

ಛತ್ತೀಸ್ಗಢದಲ್ಲಿ ಕಾಮುಕರ ಅಟ್ಟಹಾಸ ಎಲ್ಲೆ ಮೀರಿದೆ. ಕೊರಿಯಾ ಜಿಲ್ಲೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಕೂಡಿ ಹಾಕಿ 9 ಮಂದಿ 15 ದಿನಗಳ ಕಾಲ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಮಂಗಳವಾರ ಪೊಲೀಸರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಮಧ್ಯಪ್ರದೇಶದ ಬಿಜುರಿ ರೈಲ್ವೆ ನಿಲ್ದಾಣದ ಬಳಿ 15 ವರ್ಷ ಹಾಗೂ 17 ವರ್ಷದ ಇಬ್ಬರು ಬಾಲಕಿಯರನ್ನು ಪೊಲೀಸರು ರಕ್ಷಿಸಿದ್ದಾರೆ. ಪೀಡಿತ ಹುಡುಗಿಯರು ಛತ್ತೀಸ್ಗಢ ಹಾಗೂ ಮಧ್ಯಪ್ರದೇಶದ ಗಡಿ ಜಿಲ್ಲೆ ಕೊರಿಯಾದ ಜಗರಖಾಂಡ್ ನವರು ಎನ್ನಲಾಗಿದೆ.

ಪೀಡಿತ ಹುಡುಗಿಯರಲ್ಲಿ ಒಬ್ಬಳು ಮುಖ್ಯ ಆರೋಪಿ 20 ವರ್ಷದ ಅಭಿಜೀತ್ ಎಂಬಾತನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಮಾರ್ಚ್ 4ರಂದು ಮದುವೆಯಾಗುವ ನೆಪ ಹೇಳಿ ಆಕೆಯನ್ನು ಕರೆದೊಯ್ದಿದ್ದಾನೆ. ಆಕೆ ಜೊತೆ ಆಕೆ ಸ್ನೇಹಿತೆ ಕೂಡ ಹೋಗಿದ್ದಾಳೆ. ನಿರ್ಜನ ಪ್ರದೇಶಕ್ಕೆ ಹುಡುಗಿಯರನ್ನು ಕರೆದೊಯ್ದ ಅಭಿಜೀತ್ ಸ್ನೇಹಿತರನ್ನು ಅಲ್ಲಿಗೆ ಕರೆಯಿಸಿಕೊಂಡಿದ್ದಾನೆ. ಸತತ 15 ದಿನಗಳ ಕಾಲ ನಿರಂತರ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ. ಮಾರ್ಚ್ 18ರಂದು ಹುಡುಗಿ ಮನೆಯವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರಂತೆ. ದೂರಿನ ಮೇಲೆ ದಾಳಿ ನಡೆಸಿದ ಪೊಲೀಸರು ಹುಡುಗಿಯರನ್ನು ರಕ್ಷಿಸಿದ್ದಾರೆ. ದಾಳಿ ವೇಳೆ 9 ಆರೋಪಿಗಳಲ್ಲಿ 7 ಮಂದಿಯನ್ನು ಬಂಧಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...