alex Certify
ಕನ್ನಡ ದುನಿಯಾ       Mobile App
       

Kannada Duniya

ಯೋಗಿ ಆದೇಶ ಹೊರ ಬರ್ತಿದ್ದಂತೆ 3 ಕಡೆ ಎನ್ಕೌಂಟರ್

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ ನೀಡ್ತಿದ್ದಂತೆ ಪೊಲೀಸರು ತೊಡೆ ತಟ್ಟಿ ನಿಂತಿದ್ದಾರೆ. ಮೂರು ಜಿಲ್ಲೆಗಳಲ್ಲಿ ಎನ್ಕೌಂಟರ್ ನಡೆದಿದೆ. ಲಕ್ನೋದಲ್ಲಿ ನರೇಶ್ ಭಾಟಿಯಾ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಗುಂಡು ಬೀಳ್ತಿದ್ದಂತೆ ನರೇಶ್ ಪೊಲೀಸ್ ಕೈಗೆ ಸಿಕ್ಕಿದ್ದಾನೆ.

ಇನ್ನು ಕಾನ್ಪುರದಲ್ಲಿ ಕೂಡ ಗುಂಡಿನ ಸದ್ದು ಕೇಳಿದೆ. ಸಹರಾನ್ಪುರ್ ಹಾಗೂ ಕಾನ್ಪುರದಲ್ಲಿ ಪೊಲೀಸ್ ಗುಂಡಿಗೆ ದುಷ್ಕರ್ಮಿಗಳು ಗಾಯಗೊಂಡಿದ್ದಾರೆ. ಮಂಗಳವಾರ ರಾತ್ರಿ ಕಾನೂನು ಸುವ್ಯವಸ್ಥೆ ಬಗ್ಗೆ ಸಭೆ ನಡೆಸಿದ್ದ ಯೋಗಿ, ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದ್ದರು.

ಬುಧವಾರ ಕಾರ್ಯಪ್ರವೃತ್ತರಾದ ಪೊಲೀಸರು ಮೂರು ಜಿಲ್ಲೆಗಳಲ್ಲಿ ಎನ್ಕೌಂಟರ್ ನಡೆದಿರುವುದನ್ನು ದೃಢಪಡಿಸಿದ್ದಾರೆ. ಮೂರೂ ಕಡೆ ಮೂವರು ಆರೋಪಿಗಳಿಗೆ ಗಾಯಗಳಾಗಿದ್ದು, ಪೊಲೀಸ್ ಕೈಗೆ ಸಿಕ್ಕಿಬಿದ್ದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಉತ್ತರ ಪ್ರದೇಶದಲ್ಲಿ ಅಪರಾಧ ಪ್ರಕರಣ ಹೆಚ್ಚಾಗ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಸೂಕ್ತ ಕ್ರಮಕ್ಕೆ ಆದೇಶ ನೀಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...