alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್ ! ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ

rape-up-15789ಯುವಕನೊಬ್ಬ ತಾನು ಪ್ರೀತಿಸಿದ ಯುವತಿ ಜೊತೆ ಪರಾರಿಯಾಗಿದ್ದ ಕಾರಣ ರೊಚ್ಚಿಗೆದ್ದ ಯುವತಿ ಕುಟುಂಬಸ್ಥರು ಯುವಕನ ವೃದ್ದ ತಾಯಿಯನ್ನು ಬೆತ್ತಲೆಗೊಳಿಸಿ ತೀವ್ರವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಟಕೋನಿಯಾ ಕೋತ್ವಾಲಿ ವ್ಯಾಪ್ತಿಯಲ್ಲಿ ನಡೆದಿದೆ.

60 ವರ್ಷದ ಮಹಿಳೆಯನ್ನು ಮನೆಯಿಂದ ಹೊರಗೆಳೆದುಕೊಂಡು ಬಂದ ಗುಂಪು ಬೆತ್ತಲೆಗೊಳಿಸಿದ್ದಲ್ಲದೇ ಮುಖಕ್ಕೆ ಮಸಿ ಬಳಿದಿದ್ದಾರೆ. ಈ ಕೃತ್ಯವೆಸಗಿದವರ ಗುಂಪಿನಲ್ಲಿ ಪುರುಷರ ಜೊತೆ ಮೂವರು ಮಹಿಳೆಯರೂ ಇದ್ದರೆಂದು ಹೇಳಲಾಗಿದೆ.

ಮಹಿಳೆಯ ಪತಿ ಸಹಾಯಕ್ಕಾಗಿ ಗ್ರಾಮಸ್ಥರನ್ನು ಕರೆದುಕೊಂಡು ಬಂದ ವೇಳೆ ಮಹಿಳೆಯನ್ನು ಬಿಟ್ಟು ಗುಂಪು ಪರಾರಿಯಾಗಿದೆ. ಒಂದೇ ಗ್ರಾಮದ ಯುವಕ, ಯುವತಿ ಪರಸ್ಪರ ಪ್ರೀತಿಸುತ್ತಿದ್ದು, ಯುವತಿ ಮನೆಯಲ್ಲಿ ವಿರೋಧ ವ್ಯಕ್ತವಾದ ಕಾರಣ ಪರಾರಿಯಾಗಿದ್ದರೆನ್ನಲಾಗಿದೆ. ಇದಕ್ಕಾಗಿ ಯುವಕನ ತಾಯಿಗೆ ಶಿಕ್ಷಿಸಲಾಗಿದ್ದು, ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಪತ್ತೆಯಾಗಿರುವ ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...