alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿ ಶಾಸಕನ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ್ದ ಯುವತಿ ತಂದೆ ಸಾವು

ಉತ್ತರ ಪ್ರದೇಶ ಲಕ್ನೋದ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ್ದ ಯುವತಿ ತಂದೆ ಸಾವನ್ನಪ್ಪಿದ್ದಾರೆ. ಪೊಲೀಸ್ ಕಸ್ಟಡಿಯಲ್ಲಿಯೇ ಪೀಡಿತ ಯುವತಿ ತಂದೆ ಸಾವನ್ನಪ್ಪಿದ್ದಾನೆ. ರವಿವಾರ ಪೊಲೀಸರು ಪೀಡಿತೆಯ ತಂದೆಯನ್ನು ವಶಕ್ಕೆ ಪಡೆದಿದ್ದರು.

ಭಾನುವಾರ ಪೀಡಿತ ಯುವತಿ ಹಾಗೂ ಆಕೆ ಕುಟುಂಬಸ್ಥರು ಉತ್ತರ ಪ್ರದೇಶದ ಲಕ್ನೋದಲ್ಲಿರುವ ಸಿಎಂ ನಿವಾಸದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದರು. ಬಿಜೆಪಿ ಶಾಸಕ ನನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ. ಈ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲವೆಂದು ಆರೋಪ ಮಾಡಿದ್ದ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಸೂಕ್ತ ಕ್ರಮಕೈಗೊಳ್ಳದೆ ಹೋದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸೀಮೆ ಎಣ್ಣೆ ಸುರಿದುಕೊಂಡಿದ್ದಳು.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಂದೆಯನ್ನೂ ಪೊಲೀಸರು ಬಂಧಿಸಿದ್ದರು. ಹೊಟ್ಟೆ ನೋವು ಹಾಗೂ ವಾಂತಿಯಿಂದ ಬಳಲುತ್ತಿದ್ದ ಪೀಡಿತೆ ತಂದೆಯನ್ನು ಉನ್ನೊ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.  ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಶಾಸಕರ ಸಹೋದರರು ಪೀಡಿತೆ ತಂದೆಗೆ ಥಳಿಸಿದ್ದರು ಎಂಬ ಆರೋಪವಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...