alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಿಳೆಯನ್ನು ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿಹಾಕಿ ಹೊಡೆದ್ರು

ಹೊಸ ಸರ್ಕಾರ ಅಧಿಕಾರಕ್ಕೆ ಬಂದು ವರ್ಷವಾದ್ರೂ ಉತ್ತರ ಪ್ರದೇಶದ ಪರಿಸ್ಥಿತಿ ಮಾತ್ರ ಬದಲಾಗಿಲ್ಲ. ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯ, ಅತ್ಯಾಚಾರ, ಹಿಂಸೆ ನಡೆಯುತ್ತಲೇ ಇದೆ. ಲಲಿತ್ಪುರದಲ್ಲಿ ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ.

ತಂದೆ-ಮಗ, ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿಹಾಕಿದ್ದಾರೆ. ನಂತ್ರ ಮನಸ್ಸಿಗೆ ಬಂದಂತೆ ಥಳಿಸಿದ್ದಾರೆ. ಗುರುವಾರ ಘಟನೆ ನಡೆದಿದೆ. ಹಿಮಾಂಶು ಎಂಬಾತ ಗ್ರಾಮದಲ್ಲಿ ಅಕ್ರಮ ಮದ್ಯ ವ್ಯವಹಾರ ನಡೆಸುತ್ತಿದ್ದಾನಂತೆ. ಆತನ ಮನೆಯಲ್ಲಿ ಪತಿಯಿದ್ದಾನೆಂಬ ಶಂಕೆ ಮೇಲೆ ದಲಿತ ಮಹಿಳೆ ಹಿಮಾಂಶು ಬಳಿ ಗಂಡನ ಬಗ್ಗೆ ವಿಚಾರಿಸಿದ್ದಾಳೆ. ಇದ್ರಿಂದ ಕೋಪಗೊಂಡ ಹಿಮಾಂಶು ತನ್ನ ಮಗನ ಜೊತೆ ಸೇರಿ ಈ ಕೃತ್ಯವೆಸಗಿದ್ದಾನೆ.

ಮೊದಲು ಮಹಿಳೆಯನ್ನು ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ್ದಾರೆ. ಇಷ್ಟೇ ಅಲ್ಲ ತಪ್ಪಿಸಲು ಬಂದ ಅಪ್ರಾಪ್ತ ಬಾಲಕಿಗೆ ಕೂಡ ಹೊಡೆದಿದ್ದಾರೆ. ಈ ಬಗ್ಗೆ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ವಿಚಾರಣೆ ನಡೆಸ್ತಿರುವ ಪೊಲೀಸರು ಈವರೆಗೂ ಯಾರನ್ನೂ ಬಂಧಿಸಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...