
ಸಾಮಾಜಿಕ ಜಾಲತಾಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಾಕಿದ ಕಾರಣ ನೋಯಿಡಾದ ತ್ಯಾಜ್ಯ ಸಂಗ್ರಹಗಾರನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ವಾಟ್ಸಾಪ್ ಹಾಗೂ ಪೇಸ್ಬುಕ್ನಲ್ಲಿ ಈ ಚಿತ್ರವನ್ನು ಪೋಸ್ಟ್ ಮಾಡಿದ್ದಾನೆ ಎನ್ನಲಾಗಿದೆ. ಚಿತ್ರವನ್ನು ಅಪ್ಲೋಡ್ ಮಾಡಲು ಬಳಸಿದ ಮೊಬೈಲ್ ಫೋನನ್ನು ಪೊಲೀಸರು ವಶಪಡಿಸಿಕೊಂಡಿದ್ದು, ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.
ಇದೊಂದು ಸೂಕ್ಷ್ಮ ಪ್ರಕರಣವಾದ ಕಾರಣ ಬಂಧಿತನ ಗುರುತನ್ನು ಬಿಟ್ಟುಕೊಡಲು ಪೊಲೀಸರು ನಿರಾಕರಿಸಿದ್ದಾರೆ.