alex Certify
ಕನ್ನಡ ದುನಿಯಾ       Mobile App
       

Kannada Duniya

ಬಲವಂತವಾಗಿ ಮೂತ್ರ ಕುಡಿಸಿದ ಗ್ರಾಮಸ್ಥರು, ನೊಂದ ಯುವಕ ಮಾಡಿದ್ದೇನು?

ಅಕ್ರಮ ಸಂಬಂಧದ ಆರೋಪ ಹೊರಿಸಿ ಬಲವಂತವಾಗಿ ಮೂತ್ರ ಕುಡಿಸಿದ್ದರಿಂದ ನೊಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಉತ್ತರ ಪ್ರದೇಶದ ಸಹರನ್ಪುರದಲ್ಲಿ ಈ ಘಟನೆ ನಡೆದಿದೆ. ಯುವತಿಯೊಬ್ಬಳ ಜೊತೆಗೆ ಆತ ಅಕ್ರಮ ಸಂಬಂಧ ಹೊಂದಿದ್ದಾನೆ ಅಂತಾ ಪಂಚಾಯ್ತಿ ಮುಖಂಡರು ಆರೋಪ ಮಾಡಿದ್ರು.

ಗ್ರಾಮಸ್ಥರೆಲ್ಲ ಸೇರಿ ಆತನನ್ನು ಹಿಡಿದು ಚೆನ್ನಾಗಿ ಥಳಿಸಿದ್ದಾರೆ. ನಂತರ ಬಲವಂತವಾಗಿ ಮೂತ್ರ ಕುಡಿಸಿದ್ದಾರೆ. ಈ ಘಟನೆಯಿಂದ ನೊಂದ ಯುವಕ ವಿಷ ಸೇವಿಸಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ. ಆದ್ರೆ ಅಕ್ರಮ ಸಂಬಂಧ ಆರೋಪವನ್ನು ಆತ ನಿರಾಕರಿಸಿದ್ದಾನೆ.

ಆ ಯುವತಿ ಯಾರು ಅನ್ನೋದೇ ತನಗೆ ಗೊತ್ತಿಲ್ಲ. ನನ್ನ ಜೀವಕ್ಕೆ ಅಪಾಯವಿದೆ, ದಯವಿಟ್ಟು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ ಅಂತಾ ಮನವಿ ಮಾಡಿದ್ದಾನೆ. ಪ್ರಕರಣ ದಾಖಲು ಮಾಡಿಕೊಂಡಿರೋ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...