alex Certify
ಕನ್ನಡ ದುನಿಯಾ       Mobile App
       

Kannada Duniya

ಸಾಮೂಹಿಕ ಅತ್ಯಾಚಾರ ಎಸಗಿದ ಕಿರಾತಕರು

gangrape-up

ಗೋರಖ್ ಪುರ: ಮದುವೆ ಮನೆಯಲ್ಲಿ ಡ್ಯಾನ್ಸ್ ಮಾಡಲು ಒಪ್ಪದ ಯುವತಿಯ ಮೇಲೆ ಕಾಮುಕರು, ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೇ, ಆಕೆಯ ಗುಪ್ತಾಂಗವನ್ನು ಸಿಗರೇಟ್ ನಿಂದ ಸುಟ್ಟ ಅಮಾನವೀಯ ಘಟನೆ ಉತ್ತರಪ್ರದೇಶದ ಗೋರಖ್ ಪುರದಲ್ಲಿ ನಡೆದಿದೆ.

ಗೋರಖ್ ಪುರದಿಂದ ಸುಮಾರು 50 ಕಿಲೋ ಮೀಟರ್ ದೂರದಲ್ಲಿರುವ ಖುಷಿನಗರದಲ್ಲಿ ಈ ಘಟನೆ ನಡೆದಿದೆ. ವಾರಣಾಸಿಯಲ್ಲಿದ್ದ ಯುವತಿ, ತಾಯಿಯನ್ನು ಕಾಣಲು ಊರಿಗೆ ಬಂದಿದ್ದು, ಈ ಸಂದರ್ಭದಲ್ಲಿ ತಾಯಿಯ ಸ್ನೇಹಿತೆಯೊಬ್ಬರ ಆಹ್ವಾನದ ಮೇರೆಗೆ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಳೆ. ಮದುವೆ ಹಿಂದಿನ ದಿನದ ರಾತ್ರಿ ಡ್ಯಾನ್ಸ್ ಮಾಡುವಂತೆ ಯುವತಿಯನ್ನು ಆಹ್ವಾನಿಸಲಾಗಿದ್ದು, ಈಕೆ ನಿರಾಕರಿಸಿದ್ದಾಳೆ. ಆಕೆಯನ್ನು ಹೊರಗೆ ಕರೆದೊಯ್ದ ಯುವಕರ ಗುಂಪೊಂದು ಸಾಮೂಹಿಕ ಅತ್ಯಾಚಾರ ಎಸಗಿದೆ.

ಬಳಿಕ ಗುಪ್ತಾಂಗವನ್ನು ಸಿಗರೇಟ್ ನಿಂದ ಸುಟ್ಟಿದ್ದು, ಮನೆಯ ರೂಂ ಒಂದರಲ್ಲಿ ಆಕೆಯನ್ನು ಕೂಡಿ ಹಾಕಿದ್ದಾರೆ. ಅಲ್ಲಿಂದ ತಪ್ಪಿಸಿಕೊಂಡು ಬಂದ ಯುವತಿ ಪರಿಚಯಸ್ಥರೊಬ್ಬರ ಮನೆಯಲ್ಲಿ ಆಶ್ರಯ ಪಡೆದುಕೊಂಡಿದ್ದಾಳೆ. ಮಾರನೇ ದಿನ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತಲೆ ಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...