alex Certify
ಕನ್ನಡ ದುನಿಯಾ       Mobile App
       

Kannada Duniya

ತನ್ನ ಇಚ್ಛೆಗೆ ವಿರುದ್ಧವಾಗಿ ಮಗಳು ಮದುವೆಯಾಗಿದ್ದಕ್ಕೆ ಈತ ಮಾಡಿದ್ದೇನು ಗೊತ್ತಾ…?

ತನ್ನ ಇಚ್ಛೆಗೆ ವಿರುದ್ಧವಾಗಿ ಮಗಳು ಮದುವೆಯಾಗಿದ್ದಕ್ಕೆ ಮನನೊಂದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಮಗನಿದ್ದ ಕಾರನ್ನು ಕಾಲುವೆಗೆ ಹಾರಿಸಿದ್ದು, ಬಾಲಕ ಸಹಿತ ಮೂವರೂ ಮೃತಪಟ್ಟ ದಾರುಣ ಘಟನೆ ಹರಿಯಾಣದಲ್ಲಿ ನಡೆದಿದೆ.

ನಿರಂಜನ ದಾಸ(40), ಆತನ ಪತ್ನಿ ನೀಲಂ(38) ಮತ್ತು 11 ವರ್ಷ ವಯಸ್ಸಿನ ಮಗ ಮೃತಪಟ್ಟವರು. ಫತೇಹಾಬಾದ್ ಜಿಲ್ಲೆಯ ರತಿಯಾ ಪಟ್ಟಣದ ಬಳಿಯ ರೊಂಜಾವಲಿ ಗ್ರಾಮದಲ್ಲಿ ಭಾನುವಾರ ಸಂಜೆ ಈ ಘಟನೆ ನಡೆದಿದೆ.

ಹಳೆ ಕಾರುಗಳ ಮಾರಾಟ ಮತ್ತು ಖರೀದಿ ವ್ಯವಹಾರ ಮಾಡುತ್ತಿದ್ದ ದಾಸ್, ಕುಟುಂಬದ ವಿರೋಧ ಕಟ್ಟಿಕೊಂಡು ಮಗಳು ಮದುವೆ ಮಾಡಿಕೊಂಡಿರುವುದಕ್ಕೆ ಅಸಮಾಧಾನಗೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮೂರೂ ಶವಗಳು ಕಾರಿನಲ್ಲಿ ಪತ್ತೆಯಾಗಿದ್ದು, ಸೋಮವಾರ ಕಾಲುವೆಯಿಂದ ಮೇಲಕ್ಕೆತ್ತಲಾಗಿದೆ.

Subscribe Newsletter

Get latest updates on your inbox...

Opinion Poll

  • ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಉಳಿದ ಅವಧಿಯನ್ನು ಪೂರೈಸಲಿದೆಯಾ...?

    View Results

    Loading ... Loading ...