alex Certify
ಕನ್ನಡ ದುನಿಯಾ       Mobile App
       

Kannada Duniya

ಮದುವೆಗೆ ಒಂದು ತಿಂಗಳ ಮೊದಲು ಆ್ಯಸಿಡ್ ದಾಳಿಗೆ ತುತ್ತಾದ ಮಹಿಳೆ

ಉತ್ತರ ಪ್ರದೇಶದ ಉನ್ನಾವ್ ಜಿಲ್ಲೆಯಲ್ಲಿ ಮಹಿಳೆ ಮೇಲೆ ಆ್ಯಸಿಡ್ ದಾಳಿ ನಡೆದಿದೆ. ಬೈಕ್ ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಮಹಿಳೆ ಮೇಲೆ ಆ್ಯಸಿಡ್ ಎರಚಿದ್ದಾರೆ. ಎಪ್ರಿಲ್ 24ರಂದು ಆಕೆಯ ವಿವಾಹ ನಿಶ್ಚಯವಾಗಿತ್ತು.

ಮನೆಯ ಒಳಗೆ ವಿಪರೀತ ಸೆಖೆ ಇದ್ದಿದ್ದರಿಂದ ಆಕೆ ಹೊರಗೆ ಮಲಗಿದ್ದಳು. ಸಹೋದರಿ ಹಾಗೂ 4 ವರ್ಷದ ಸೋದರಳಿಯ ಕೂಡ ಅಲ್ಲೇ ಮಲಗಿದ್ದರು. ಅದನ್ನು ಗಮನಿಸಿದ ದುಷ್ಕರ್ಮಿಗಳು ಆಕೆಗೆ ಆ್ಯಸಿಡ್ ಹಾಕಿದ್ದಾರೆ.

ಆ್ಯಸಿಡ್ ದಾಳಿಯಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಅವಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಲ ದಿನಗಳ ಹಿಂದಷ್ಟೆ ಗಾಜಿಯಾಬಾದ್ ನಲ್ಲಿ 24 ವರ್ಷದ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆದಿತ್ತು. ಆಕೆ ಪಂಜಾಬ್ ನ್ಯಾಶನಲ್ ಬ್ಯಾಂಕ್ ಉದ್ಯೋಗಿ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...