alex Certify
ಕನ್ನಡ ದುನಿಯಾ       Mobile App
       

Kannada Duniya

ಲೈವ್ ಮರ್ಡರ್ ವಿಡಿಯೋ ವೈರಲ್

ಉತ್ತರ ಪ್ರದೇಶದಲ್ಲಿ ಎಷ್ಟೇ ಎನ್ಕೌಂಟರ್ ನಡೆದ್ರೂ ಅಪರಾಧ ಪ್ರಕರಣಗಳು ಮಾತ್ರ ನಿಂತಿಲ್ಲ. ಈಗ ಹತ್ಯೆಯ ಲೈವ್ ವಿಡಿಯೋವೊಂದು ವೈರಲ್ ಆಗಿದೆ. ವಿಡಿಯೋ ನೋಡಿ ದಂಗಾದ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಮಾತ್ರ ಯಾವುದೇ ದೂರು ದಾಖಲಿಸಿಕೊಂಡಿರಲಿಲ್ಲ. ಮಾಧ್ಯಮದಲ್ಲಿ ವರದಿ ಪ್ರಸಾರವಾದ ಮೇಲೆ ಎಚ್ಚೆತ್ತುಕೊಂಡಿದ್ದಾರೆ.

ಘಟನೆ ಸಂಭಾಲ್ ಜಿಲ್ಲೆಯಲ್ಲಿ ನಡೆದಿದೆ. ವ್ಯಕ್ತಿಯನ್ನು ಕೆಲವರು ಹೊಡೆದು ಹೊಡೆದು ಕೊಲೆ ಮಾಡಿದ್ದಾರೆ. ಒದೆ ತಿನ್ನುತ್ತಿದ್ದ ವ್ಯಕ್ತಿ ಪ್ರಾಣ ಉಳಿಸುವಂತೆ ಭಿಕ್ಷೆ ಬೇಡಿದ್ದಾನೆ. ಆದ್ರೆ ಕೊಲೆಗಡುಕರು ಮಾತ್ರ ಕರುಣೆ ತೋರಿಸಿಲ್ಲ. ಕೊಲೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಲ್ಲದೆ ಮೋದಿ ಸರ್ಕಾರದಲ್ಲಿ ಕಾನೂನಿಗೆ ಕೆಲಸವಿಲ್ಲವೆಂದು ಶೀರ್ಷಿಕೆ ಹಾಕಿದ್ದಾರೆ.

ಈ ವಿಡಿಯೋ ಮೃತನ ಕುಟುಂಬಸ್ಥರ ಕೈಗೂ ಸಿಕ್ಕಿದೆ. ಸೂಕ್ಷ್ಮವಾಗಿ ವಿಡಿಯೋ ವೀಕ್ಷಣೆ ಮಾಡಿದಾಗ ಮೃತ ವ್ಯಕ್ತಿ ಸಹೋದರ ಎಂಬುದು ಗೊತ್ತಾಗಿದೆ. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಘಟನೆ ದೆಹಲಿಯಲ್ಲಿ ನಡೆದಿದೆ ಎಂಬ ಕಾರಣ ನೀಡಿ ಪೊಲೀಸರು ಕೇಸ್ ದಾಖಲಿಸಿಕೊಂಡಿರಲಿಲ್ಲ. ವಿಷ್ಯ ಮಾಧ್ಯಮಗಳಲ್ಲಿ ಪ್ರಸಾರವಾಗ್ತಿದ್ದಂತೆ ಎಚ್ಚೆತ್ತ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...