alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್: ವಿದ್ಯಾರ್ಥಿಯನ್ನು ಹೊಡೆದು ಸಾಯಿಸಿದ ಶಿಕ್ಷಕ

ಕೆಲವು ಶಿಕ್ಷಕರು ವಿದ್ಯಾರ್ಥಿಗಳ ಜೊತೆ ಅಮಾನವೀಯವಾಗಿ ನಡೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಿಗೆ ಆಘಾತಕಾರಿ ಸುದ್ದಿಯೊಂದು ಬಂದಿದೆ. ಶಿಕ್ಷಕರೊಬ್ಬರು ಎಂಟು ವರ್ಷದ ವಿದ್ಯಾರ್ಥಿಯೊಬ್ಬನಿಗೆ ಸಾಯುವ ರೀತಿಯಲ್ಲಿ ಹೊಡೆದಿದ್ದಾರೆ.

ಉತ್ತರಪ್ರದೇಶದಲ್ಲಿನ ಬಾಂದ್ರಾ ಜಿಲ್ಲೆಯಲ್ಲಿನ ಖಾಸಗಿ ಶಾಲೆಯೊಂದರಲ್ಲಿ ಈ ಪ್ರಕರಣ ನಡೆದಿದೆ. ಇಲ್ಲಿನ ಸದಿಮದನಾಪುಟ್‍ನ ಶಾಲೆಯ ಶಿಕ್ಷಕ ಜೈರಾಜ್ ಎಂಬಾತ ಮಂಗಳವಾರ ಎಂಟು ವರ್ಷದ ವಿದ್ಯಾರ್ಥಿ ಅರ್ಬಾಜ್‍ಗೆ ಥಳಿಸಿದ್ದಾನೆ. ತೀವ್ರ ಗಾಯಗೊಂಡ ವಿದ್ಯಾರ್ಥಿಯನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ವಿದ್ಯಾರ್ಥಿ ಶುಕ್ರವಾರ ಮೃತಪಟ್ಟಿದ್ದಾನೆ.

ಈ ಸಂಬಂಧ ಬಾಲಕನ ಮನೆಯವರು ಶಿಕ್ಷಕನ ವಿರುದ್ಧ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಘಟನೆಯ ಹಿನ್ನೆಲೆ ಹಾಗೂ ಆರೋಪದ ಸತ್ಯಾಸತ್ಯತೆ ಅರಿಯಲು ತನಿಖೆ ಆರಂಭಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...