alex Certify
ಕನ್ನಡ ದುನಿಯಾ       Mobile App
       

Kannada Duniya

5ನೇ ತರಗತಿ ವಿದ್ಯಾರ್ಥಿನಿ ಜೊತೆ ಕೆಟ್ಟದಾಗಿ ನಡೆದುಕೊಳ್ತಿದ್ದ ಶಿಕ್ಷಕ

ಐದನೇ ತರಗತಿ ವಿದ್ಯಾರ್ಥಿನಿ ಜೊತೆ ಶಿಕ್ಷಕನೊಬ್ಬ ಅಶ್ಲೀಲವಾಗಿ ನಡೆದುಕೊಂಡಿದ್ದಾನೆ. ಈ ವಿಚಾರವನ್ನು ಪಾಲಕರಿಗೆ ತಿಳಿಸಿದ್ರೆ ಹೊಡೆಯುವುದಾಗಿ ಬೆದರಿಸಿದ್ದಾನೆ. ಚಿಕ್ಕಪ್ಪನ ಮನೆಯಲ್ಲಿ ವಾಸವಾಗಿರುವ ಬಾಲಕಿ ಮನೆಗೆ ಬಂದು ಎಲ್ಲ ವಿಷ್ಯ ತಿಳಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ಶುರುಮಾಡಿದ್ರೆ, ಶಾಲೆ ಶಿಕ್ಷಕನನ್ನು ವಜಾ ಮಾಡಿದೆ.

ಘಟನೆ ಉತ್ತರ ಪ್ರದೇಶದ ಕೋಟ್ವಾಲಿಯಲ್ಲಿ ನಡೆದಿದೆ. 10 ವರ್ಷದ ಬಾಲಕಿ ಖಾಸಗಿ ಶಾಲೆಯೊಂದರಲ್ಲಿ 5ನೇ ತರಗತಿ ಓದುತ್ತಿದ್ದಾಳೆ. ಅಧ್ಯಯನ ಮಾಡಿಸುವಾಗ ಶಿಕ್ಷಕ ಅಶ್ಲೀಲವಾಗಿ ನಡೆದುಕೊಂಡಿದ್ದಾನಂತೆ. ಈ ವಿಷ್ಯ ಬಾಯಿಬಿಟ್ರೆ ಹೊಡೆಯುವುದಾಗಿ ಬೆದರಿಸಿದ್ದಾನಂತೆ.

ಬಾಲಕಿ ಚಿಕ್ಕಪ್ಪ ಶಾಲೆ ಆಡಳಿತ ಮಂಡಳಿಗೆ ದೂರು ನೀಡಿದ್ದಾನೆ. ಶಿಕ್ಷಕ ಪರಾರಿಯಾಗಿದ್ದು, ತನಿಖೆ ನಡೆಯುತ್ತಿದೆ. ಶೀಘ್ರದಲ್ಲಿಯೇ ಆರೋಪಿ ಬಂಧಿಸುವುದಾಗಿ ಪೊಲೀಸರು ಹೇಳಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...