alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರೇಮಿಗಳ ದಿನದಂದೇ ಹರಿಯಿತು ನೆತ್ತರು

murder-22-600-jpg

ಪ್ರೇಮಿಗಳ ದಿನಾಚರಣೆಯಂದು ಪ್ರೀತಿಸಿದ ಮಡದಿಯನ್ನು ಖುಷಿಯಾಗಿಡಬೇಕಾದ ಗಂಡನೊಬ್ಬ ಜಗಳವಾಡಿ ಆಕೆಯನ್ನು ಕೊಲೆ ಮಾಡಿದ ಘಟನೆ ಇಂದೋರ್ ದ್ವಾರಕಾಪುರದಲ್ಲಿ ನಡೆದಿದೆ. ಅನಿತಾ ಕೊಲೆಯಾದ ಮಹಿಳೆ. ಪತಿ ನಾರಾಯಣ ಕೂಡ ಆಸ್ಪತ್ರೆಯಲ್ಲಿ ಸಾವು- ಬದುಕಿನ ನಡುವೆ ಹೋರಾಡುತ್ತಿದ್ದಾನೆ.

ಅನಿತಾ ಹಾಗೂ ನಾರಾಯಣ್ ಪ್ರೀತಿಸಿ ಮದುವೆಯಾಗಿದ್ದು, ಈತ ಸ್ಥಳೀಯ ಸಂಸ್ಥೆಯೊಂದರಲ್ಲಿ ಗುತ್ತಿಗೆ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ಕೆಲಸ ಬಿಟ್ಟಿದ್ದ ನಾರಾಯಣ ಮನೆಯಲ್ಲಿ ಪತ್ನಿಯೊಂದಿಗೆ ದಿನಾಲು ಜಗಳವಾಡುತ್ತಿದ್ದ. ಪ್ರೇಮಿಗಳ ದಿನದಂದು ಪತ್ನಿಯೊಂದಿಗೆ ಜಗಳವಾಡಿದ ನಾರಾಯಣ ಸಿಟ್ಟಿನಿಂದ ಆಕೆಯ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ. ಚಾಕು ಹಿಡಿದುಕೊಂಡೇ ಮನೆಯಿಂದ ಹೊರಗೆ ಬಂದಿದ್ದ ಅವನನ್ನು ಗಮನಿಸಿದ ನೆರೆಹೊರೆಯವರು ಮನೆಯೊಳಗೆ ಹೋಗಿ ನೋಡಿದಾಗ ಅನಿತಾ ರಕ್ತದ ಮಡುವಿನಲ್ಲಿ ಬಿದ್ದಿದ್ದರು.

ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಪತ್ನಿ ಸಾವನ್ನಪ್ಪಿದ ಸುದ್ದಿ ಕೇಳಿದ ನಾರಾಯಣ ತಾನೂ ಕುತ್ತಿಗೆ ಕೊಯ್ದುಕೊಂಡಿದ್ದಾನೆ. ಆತನನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...