alex Certify
ಕನ್ನಡ ದುನಿಯಾ       Mobile App
       

Kannada Duniya

ವಿದ್ಯಾರ್ಥಿನಿ ಮೇಲೆ ಚಲಿಸುತ್ತಿದ್ದ ವಾಹನದಲ್ಲೇ ನಡೀತು ಕುಕೃತ್ಯ

Crime 3

ವಿಜಯಪುರ: ನಿಮ್ಮ ತಾಯಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಸುಳ್ಳು ಹೇಳಿ ಅಪ್ರಾಪ್ತೆಯೊಬ್ಬಳನ್ನು ವಾಹನದಲ್ಲಿ ಅಪಹರಿಸಿದ ಪುಂಡರು, ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ವಿಜಯಪುರದಲ್ಲಿ ನಡೆದಿದೆ.

ಶಿವಾನಂದ್, ಮೆಹಬೂಬ್ ಸೇರಿದಂತೆ ನಾಲ್ಕೈದು ಮಂದಿ ಇದ್ದ ತಂಡ, ವಿಜಯಪುರ ಹಾಸ್ಟೆಲ್ ನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಿಸಿದ್ದಾರೆ. ನಿಮ್ಮ ತಾಯಿಗೆ ನಾವೇ ಆಸ್ಪತ್ರೆಗೆ ಸೇರಿಸಿ ಬಂದಿದ್ದೇವೆ ಎಂದು ನಂಬಿಸಿ ಆಕೆಯನ್ನು ಟಾಟಾ ಸುಮೋ ವಾಹನದಲ್ಲಿ ಅಪಹರಿಸಿ ಚಲಿಸುತ್ತಿದ್ದ ವಾಹನದಲ್ಲೇ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಆಕೆ, ಪ್ರತಿರೋಧ ವ್ಯಕ್ತಪಡಿಸಿದಾಗ, ಅಮಾನವೀಯವಾಗಿ ಹಲ್ಲೆ ಮಾಡಿದ್ದಾರೆ. ಗ್ರಾಮವೊಂದರ ಬಳಿ ನೀರು ತರಲು ವಾಹನ ನಿಲ್ಲಿಸಿದ್ದು, ಈ ಸಂದರ್ಭದಲ್ಲಿ ವಿದ್ಯಾರ್ಥಿನಿ ಜೋರಾಗಿ ಕಿರುಚಾಡಿದ್ದಾಳೆ.

ಗ್ರಾಮಸ್ಥರು, ಒಂದುಗೂಡಿ ಆಕೆಯನ್ನು ರಕ್ಷಿಸಿದ್ದು, ಇಬ್ಬರು ದುಷ್ಕರ್ಮಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಉಳಿದವರು ಪರಾರಿಯಾಗಿದ್ದಾರೆ. ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...