alex Certify
ಕನ್ನಡ ದುನಿಯಾ       Mobile App
       

Kannada Duniya

ಪಶ್ಚಿಮ ಬಂಗಾಳದಲ್ಲಿ ನಡೆದಿದೆ ನಾಚಿಕೆಗೇಡಿ ಕೆಲಸ

ಮನು ಕುಲ ತಗ್ಗಿಸುವಂತಹ ಘಟನೆ ನಡೆದಿದೆ. ಮಹಿಳೆಯರು, ಮಕ್ಕಳಿಗೆ ಎಲ್ಲಿಯೂ ರಕ್ಷಣೆ ಇಲ್ಲದಂತಾಗಿದೆ.

ಒಂದು ವರ್ಷದ ಮಗುವಿನಿಂದ ಹಿಡಿದು 100 ವರ್ಷದ ವೃದ್ಧೆಯವರೆಗೆ ಎಲ್ಲ ವಯಸ್ಸಿನ ಮಹಿಳೆಯರೂ ಕಾಮುಕರಿಗೆ ಬಲಿಯಾಗ್ತಿದ್ದಾರೆ. ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾದ್ರೂ ಅತ್ಯಾಚಾರ ಘಟನೆ ಮಾತ್ರ ನಿಲ್ಲುತ್ತಿಲ್ಲ. ಪಶ್ಚಿಮ ಬಂಗಾಳದಲ್ಲಿ ಆಘಾತಕಾರಿ ಘಟನೆ ನಡೆದಿದೆ.

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ 20 ವರ್ಷದ ಯುವಕ 100 ವರ್ಷದ ವೃದ್ಧೆ ಮೇಲೆ ಅತ್ಯಾಚಾರವೆಸಗಿದ್ದಾನೆ. ಸೋಮವಾರ ಘಟನೆ ನಡೆದಿದೆಯಂತೆ. ಮಂಗಳವಾರ ವೃದ್ಧೆ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ವೈದ್ಯಕೀಯ ಪರೀಕ್ಷೆ ನಂತ್ರ ವೃದ್ಧೆಯನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಮಂಗಳವಾರ ಬಂಧಿಸಿದ್ದಾರೆ. ಆರೋಪಿ ಅಭಿಜಿತ್ ಗೆ ನ್ಯಾಯಾಂಗ ಬಂಧನವಾಗಿದೆ. ಪ್ರಕರಣದ ವಿಚಾರಣೆ ಮುಂದುವರೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...