alex Certify
ಕನ್ನಡ ದುನಿಯಾ       Mobile App
       

Kannada Duniya

ವಿದ್ಯಾರ್ಥಿನಿಗೆ ಕಿರುಕುಳ ನೀಡ್ತಿದ್ದವನಿಗೆ ಧರ್ಮದೇಟು

ಬಿಹಾರದ ಸಹರಸಾದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡ್ತಿದ್ದ ಶಿಕ್ಷಕನೊಬ್ಬನಿಗೆ ಸ್ಥಳೀಯರು ಧರ್ಮದೇಟು ನೀಡಿದ್ದಾರೆ. ಇಷ್ಟೇ ಅಲ್ಲ ಶಿಕ್ಷಕನ ಮುಖಕ್ಕೆ ಬಣ್ಣ ಬಳಿದು ಗ್ರಾಮದ ತುಂಬಾ ಮೆರವಣಿಗೆ ಮಾಡಿಸಿದ್ದಾರೆ.

ಸ್ಥಳೀಯರ ಪ್ರಕಾರ,ಶಿಕ್ಷಕ ಲುಕ್ಮನ್ ಅಲಿ ಖಾನ್ ಶಾಲೆ ಕೊಠಡಿಯಲ್ಲಿಯೇ 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ವಿದ್ಯಾರ್ಥಿನಿ ಸ್ಕೂಲಿನ ಇತರ ಶಿಕ್ಷಕರಿಗೆ ತಿಳಿಸಿದ್ದಳಂತೆ. ಗ್ರಾಮಸ್ಥರು ಬುಧವಾರ ಶಿಕ್ಷಕನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ನಂತ್ರ ಮನಸ್ಸಿಗೆ ಬಂದಂತೆ ಥಳಿಸಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರಿಗೆ ಗ್ರಾಮಸ್ಥರನ್ನು ಶಾಂತಗೊಳಿಸಲು ಹರಸಾಹಸಪಡಬೇಕಾಯ್ತು. ನಂತ್ರ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿಕ್ಷಕನಿಗೆ ಕಠಿಣ ಶಿಕ್ಷೆ ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...