alex Certify
ಕನ್ನಡ ದುನಿಯಾ       Mobile App
       

Kannada Duniya

ವಾಟ್ಸಾಪ್ ನಲ್ಲಿ ಯುವತಿಯ ಬೆತ್ತಲೆ ಫೋಟೋ ಶೇರ್ !

whatsapp-voice-calls

ಕೆಲವರು ವಿಕೃತ ಮನೋಭಾವದ ಕಾಮುಕರು ಹೇಗೆಲ್ಲಾ ಇರುತ್ತಾರೆ ಹಾಗೂ ತಂತ್ರಜ್ಞಾನವನ್ನು ಹೇಗೆಲ್ಲಾ ದುರ್ಬಳಕೆ ಮಾಡಿಕೊಂಡು ಹೆಣ್ಣುಮಕ್ಕಳ ಗೌರವಕ್ಕೆ ಚ್ಯುತಿ ತರಲಾಗುತ್ತದೆ ಎಂಬುದಕ್ಕೆ ಈ ಪ್ರಕರಣ
ಉದಾಹರಣೆಯಂತಿದೆ.

ಬೆತ್ತಲೆ ಯುವತಿಯ ಭಾವಚಿತ್ರಕ್ಕೆ ಬೆಂಗಳೂರಿನ ಕಾಲೇಜೊಂದರಲ್ಲಿ ಓದುತ್ತಿರುವ ವಿದ್ಯಾರ್ಥಿನಿಯೊಬ್ಬರ ಮುಖದ ಭಾಗವನ್ನು ಅಂಟಿಸಿ ವಾಟ್ಸಾಪ್ ನಲ್ಲಿ ಶೇರ್ ಮಾಡಿದ್ದ ಬ್ಯಾಂಕ್ ಅಧಿಕಾರಿಯೊಬ್ಬರನ್ನು ಬೆಂಗಳೂರು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಸಿಕಂದರಾಬಾದ್ ನಲ್ಲಿರುವ ಬ್ಯಾಂಕ್ ಶಾಖೆಯೊಂದರಲ್ಲಿ ಸಹಾಯಕ ವ್ಯವಸ್ಥಾಪಕನಾಗಿ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ, ವಿದ್ಯಾರ್ಥಿನಿಯ ಸಂಬಂಧಿಯೊಬ್ಬರಿಗೆ ವಾಟ್ಸಾಪ್ ನಲ್ಲಿ ಫೋಟೋ ಕಳುಹಿಸಿದ್ದ.

ಅವರು ಫೋಟೋ ನೋಡಿ ಗಾಬರಿಯಾಗಿದ್ದು, ಯುವತಿಯ ಮನೆಯವರಿಗೆ ಮಾಹಿತಿ ನೀಡಿದ್ದರು. ಫೆಬ್ರವರಿ 3ರಂದು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದು, ಈ ಪ್ರಕರಣದ ತನಿಖೆ ಕೈಗೊಂಡ ಸಿಐಡಿ ಪೊಲೀಸರು ಬ್ಯಾಂಕ್ ಅಧಿಕಾರಿಯನ್ನು ಬಂಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...