alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ನಲ್ಲಿಯೇ ನಡೆಯಿತು ಗ್ಯಾಂಗ್ ರೇಪ್

rape-victim-generic

ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಎಗ್ಗಿಲ್ಲದೇ ಸಾಗುತ್ತಿದ್ದು, ಬಸ್ ನಲ್ಲಿಯೇ ಚಾಲಕ ಮತ್ತು ಕಂಡಕ್ಟರ್ ಸೇರಿ ಮಹಿಳೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಹೇಯ ಘಟನೆ ವರದಿಯಾಗಿದೆ.

ಹೌದು. ರಾಯ್ ಬರೇಲಿಯಲ್ಲಿ ಈ ಘಟನೆ ನಡೆದಿದ್ದು, ಸೋಮವಾರ ರಾತ್ರಿ ಬರೇಲಿಯಿಂದ 70 ಕಿ.ಮೀ. ದೂರವಿರುವ ರಾಮಪುರ್ ಗೆ ಇಬ್ಬರು ಮಕ್ಕಳೊಂದಿಗೆ ಬಸ್ ನಲ್ಲಿ 28 ವರ್ಷದ ಮಹಿಳೆ ಹೊರಟಿದ್ದಳು. ಬಸ್ ಹತ್ತಿದ ನಂತರ ಆಕೆ ನಿದ್ದೆಗೆ ಜಾರಿದ್ದು ಆಕೆಗೆ ಎಚ್ಚರವಾಗುವ ಹೊತ್ತಿಗಾಗಲೇ ಪ್ರಯಾಣಿಕರೆಲ್ಲಾ ಇಳಿದಿದ್ದರು. ಈ ಸಮಯದಲ್ಲಿ ಮಹಿಳೆ ಮೇಲೆ ಡ್ರೈವರ್ ಮತ್ತು ಕಂಡಕ್ಟರ್ ಅತ್ಯಾಚಾರ ನಡೆಸಿದ್ದು, ಅತ್ಯಾಚಾರದಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿದ್ದಾಗ ಆಕೆಯ ತೊಡೆಯ ಮೇಲೆ ಮಲಗಿದ್ದ ಮಗು ಕೆಳಗೆ ಬಿದ್ದು ಸಾವನ್ನಪ್ಪಿದೆ.

ತಮ್ಮ ಕಾಮತೃಷೆ ತೀರಿಸಿಕೊಂಡ ಕಾಮುಕ ಚಾಲಕ ಮತ್ತು ಕಂಡಕ್ಟರ್ ಮಹಿಳೆಯನ್ನು ನಡುರಸ್ತೆಯಲ್ಲಿ ಇಳಿಸಿ ಪರಾರಿಯಾಗಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...