alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಹಾರದಲ್ಲೊಂದು ನಾಚಿಕೆಗೇಡಿ ಕೃತ್ಯ

ಬಿಹಾರದ ಗಯಾ ಜಿಲ್ಲೆಯಲ್ಲಿ ಮನುಕುಲವೇ ತಲೆ ತಗ್ಗಿಸುವ ಘಟನೆಯೊಂದು ನಡೆದಿದೆ. ಕುಟುಂಬದೊಂದಿಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬನನ್ನು ಅಡ್ಡಗಟ್ಟಿದ ಶಸ್ತ್ರಸಜ್ಜಿತ ಯುವಕರ ಗುಂಪು, ಆತನ ಮುಂದೆಯೇ ಪತ್ನಿ ಹಾಗೂ 15 ವರ್ಷದ ಪುತ್ರಿ ಮೇಲೆ ಅತ್ಯಾಚಾರವೆಸಗಿ ವಿಕೃತಿ ಮೆರೆದಿದ್ದಾರೆ.

ಗಯಾ ಜಿಲ್ಲೆ ಕೋಂಚ್ ಪೊಲೀಸ್ ಠಾಣೆ ವ್ಯಾಪ್ತಿಯ ಸೊಂದಿಹಾ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ನತದೃಷ್ಟ ವ್ಯಕ್ತಿ ತನ್ನ ಪತ್ನಿ ಹಾಗೂ ಪುತ್ರಿಯೊಂದಿಗೆ ಮೋಟಾರ್ ಬೈಕ್ ನಲ್ಲಿ ಹೋಗುವಾಗ ಗನ್ ತೋರಿಸಿದ ಯುವಕರ ಗುಂಪು ಅಡ್ಡಗಟ್ಟಿದೆ.

ಬಳಿಕ ಆ ವ್ಯಕ್ತಿಯನ್ನು ಮರಕ್ಕೆ ಕಟ್ಟಿ ಹಾಕಿ ಆತನ ಮುಂದೆಯೇ ಪತ್ನಿ ಹಾಗೂ ಪುತ್ರಿ ಮೇಲೆ ಅತ್ಯಾಚಾರವೆಸಗಲಾಗಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿದ್ದು, ನಾಪತ್ತೆಯಾಗಿರುವವರ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

ವಿಚಾರಣೆ ವೇಳೆ, ಅತ್ಯಾಚಾರ ಕೃತ್ಯವೆಸಗುವ ಸ್ವಲ್ಪ ಮುನ್ನ ಇದೇ ದಾರಿಯಲ್ಲಿ ಬಂದ ವಿದ್ಯಾರ್ಥಿಗಳನ್ನು ಅಡ್ಡಗಟ್ಟಿದ್ದ ಈ ದುಷ್ಕರ್ಮಿಗಳ ಗುಂಪು, ಅವರನ್ನು ಬೆದರಿಸಿ ಮೊಬೈಲ್ ಫೋನ್ ಹಾಗೂ ಹಣ ದೋಚಿದ್ದರೆಂದು ಹೇಳಲಾಗಿದೆ. ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಕೋಂಚ್ ಪೊಲೀಸ್ ಠಾಣಾಧಿಕಾರಿಯನ್ನು ಹಿರಿಯ ಅಧಿಕಾರಿಗಳು ಸಸ್ಪೆಂಡ್ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...