alex Certify
ಕನ್ನಡ ದುನಿಯಾ       Mobile App
       

Kannada Duniya

ಚಲಿಸುತ್ತಿದ್ದ ರೈಲಿನ ಶೌಚಾಲಯದಲ್ಲಿ ಹೇಯ ಕೃತ್ಯ

ರೈಲಿನಲ್ಲೂ ಮಹಿಳೆಯರಿಗೆ ಸುರಕ್ಷತೆ ಇಲ್ಲದಂತಾಗಿದೆ. ಚಲಿಸುತ್ತಿದ್ದ ರೈಲಿನ ಶೌಚಾಲಯದಲ್ಲಿ ಪಾಪಿ ತನ್ನ ಕಾಮತೃಷೆ ತೀರಿಸಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ನಡೆದಿರುವುದು ಮಧ್ಯಪ್ರದೇಶ ಭೋಪಾಲ್ ನಲ್ಲಿ.

ಅಮರ್ಕಂಟಕ್ ಎಕ್ಸ್ಪ್ರೆಸ್ ರೈಲಿನ ಸ್ಲೀಪರ್ ಕೋಚ್ ನಲ್ಲಿದ್ದ ಬದನಿ ಮೂಲದ ಮಹಿಳೆ ಮೇಲೆ ಅತ್ಯಾಚಾರವೆಸಗಲಾಗಿದೆಯಂತೆ. ಶೌಚಾಲಯದಲ್ಲಿ ಅತ್ಯಾಚಾರವೆಸಗಲಾಗಿದೆ ಎಂದು ಮಹಿಳೆ ದೂರಿನಲ್ಲಿ ಹೇಳಿದ್ದಾಳೆ. ಘಟನೆ ನಡೆದ ದಿನವೇ ಪೀಡಿತ ಮಹಿಳೆ ದೂರು ನೀಡಲು ಮುಂದಾಗಿದ್ದಳು. ಆದ್ರೆ ಆರೋಪಿ ಆಕೆಗೆ ಜೀವ ಬೆದರಿಕೆಯೊಡ್ಡಿದ್ದ ಎನ್ನಲಾಗಿದೆ.

ಮನೆಗೆ ಬಂದು ಪತಿಗೆ ವಿಷ್ಯ ತಿಳಿಸಿದ ಮಹಿಳೆ ನಂತ್ರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. 25 ವರ್ಷದ ಜೀವನ್ ಆರೋಪಿ ಎಂಬುದು ಗೊತ್ತಾಗಿದೆ. ಮೂಲತಃ ಭೋಪಾಲ್ ನಿವಾಸಿ ಜೀವನ್ ತಲೆಮರೆಸಿಕೊಂಡಿದ್ದಾನೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...