alex Certify
ಕನ್ನಡ ದುನಿಯಾ       Mobile App
       

Kannada Duniya

ಪತಿ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಪತ್ನಿ–ಪ್ರಿಯಕರ

ಯಾದಗಿರಿ: ಸರಸವಾಡುವಾಗಲೇ ಪತ್ನಿ ಹಾಗೂ ಆಕೆಯ ಪ್ರಿಯಕರ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದರಿಂದ ಆಕ್ರೋಶಗೊಂಡ ವ್ಯಕ್ತಿ ಇಬ್ಬರನ್ನೂ ಥಳಿಸಿದ್ದಾನೆ. ಹಲ್ಲೆಗೊಳಗಾದ ಪ್ರಿಯಕರ ಸಾವು ಕಂಡಿದ್ದು, ಅಸ್ವಸ್ಥಗೊಂಡಿರುವ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಗುರುಮಿಠಕಲ್ ಸಮೀಪದ ಕೆ. ಹೊಸಹಳ್ಳಿಯ ಯೇಸುಮಿತ್ರ ಕೊಲೆ ಆರೋಪಿಯಾಗಿದ್ದಾನೆ. ಈತನ ಪತ್ನಿಯೊಂದಿಗೆ ಇದ್ದ ಇಸಾಕ್(35) ಕೊಲೆಯಾದ ವ್ಯಕ್ತಿ.

ಗುರುವಾರ ರಾತ್ರಿ ಯೇಸುಮಿತ್ರ ಮನೆಗೆ ಬಂದ ಸಂದರ್ಭದಲ್ಲಿ ಆತನ ಪತ್ನಿ ಇಸಾಕ್ ನೊಂದಿಗೆ ಅನೈತಿಕ ಚಟುವಟಿಕೆಯಲ್ಲಿ ತೊಡಗಿರುವುದು ಕಂಡು ಬಂದಿದ್ದು, ಇದರಿಂದ ಸಿಟ್ಟಾದ ಯೇಸುಮಿತ್ರ ಇಬ್ಬರನ್ನು ಥಳಿಸಿದ್ದಾನೆ. ಇಸಾಕ್ ನನ್ನು ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿ ಥಳಿಸಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಬಳಿಕ ಯೇಸುಮಿತ್ರ ತಾನೇ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಆತನ ಪತ್ನಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...