alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ಯಾಚಾರಿ ವಿರುದ್ಧ ಜೋರಾದ ಗಲಾಟೆಗೆ 30 ಮನೆ ಭಸ್ಮ

ಅತ್ಯಾಚಾರ ಪ್ರಕರಣವೊಂದು ಮಧ್ಯಪ್ರದೇಶದ ಶಿವಪುರ ಹೊತ್ತಿ ಉರಿಯುವಂತೆ ಮಾಡಿದೆ. 16 ವರ್ಷದ ಹುಡುಗನೊಬ್ಬ 2 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ನಂತ್ರ ಬಾಲಕಿ ಹತ್ಯೆಗೆ ಯತ್ನಿಸಿದ್ದಾನೆ. ಇದನ್ನು ನೋಡಿದ ಸ್ಥಳೀಯ ಮಹಿಳೆಯರು ಆತನನ್ನು ಪೊಲೀಸರಿಗೆ ನೀಡುವ ಪ್ರಯತ್ನ ಮಾಡಿದ್ದಾರೆ.

ಘಟನೆ ಖನಿಯಾದಾನಾ ಪೊಲೀಸ್ ಠಾಣೆ ಬಳಿ ನಡೆದಿದೆ. ಎರಡು ವರ್ಷದ ಮಗುವೊಂದು ಆಟವಾಡುತ್ತಿರುವುದನ್ನು ನೋಡಿದ 16 ವರ್ಷದ ಹುಡುಗ ತನ್ನ ಕಾಮತೃಷೆ ತೀರಿಸಿಕೊಂಡಿದ್ದಾನೆ. ನಂತ್ರ ಮಗುವಿನ ಹತ್ಯೆಗೆ ಯತ್ನಿಸಿದ್ದಾನೆ. ಮಗು ಅಳುವ ಶಬ್ಧ ಕೇಳಿ ಸ್ಥಳೀಯರು ಓಡಿ ಬಂದಿದ್ದಾರೆ. ಮಗುವನ್ನು ರಕ್ಷಿಸಿದ ಸ್ಥಳೀಯರು ಆರೋಪಿ ಹತ್ಯೆಗೆ ಮುಂದಾಗಿದ್ದಾರೆ.

ಆತನನ್ನ ಜೀವಂತ ಸುಡಲು ಯತ್ನಿಸಿದ ಸ್ಥಳೀಯರು ಆತನ ಮನೆಗೆ ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ 30 ಮನೆಗಳು ಸುಟ್ಟು ಭಸ್ಮವಾಗಿದೆ. 3 ಬೈಕ್ ಬೆಂಕಿಗಾಹುತಿಯಾಗಿದೆ. ಒಂದು ಸರಾಯಿ ಅಂಗಡಿಗೆ ಬೆಂಕಿ ಹಚ್ಚಲಾಗಿದೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಸ್ಥಳಕ್ಕಾಗಮಿಸಿ ಪೊಲೀಸರು ಶಾಂತಿ ಕಾಪಾಡುವ ಯತ್ನ ಮಾಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...