alex Certify ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವ ಭಕ್ತರಿಗೊಂದು ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವ ಭಕ್ತರಿಗೊಂದು ಮುಖ್ಯ ಮಾಹಿತಿ

ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ಮಾರ್ಚ್ 25ರಿಂದ ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದು, ಧಾರ್ಮಿಕ ಮಂದಿರಗಳನ್ನು ಬಂದ್ ಮಾಡಲಾಗಿದೆ. ಇದೀಗ ದೇಶದಲ್ಲಿ ಐದನೇ ಹಂತದ ಲಾಕ್ ಡೌನ್ ಜಾರಿಯಲ್ಲಿದ್ದು, ಇದರ ನಡುವೆಯೂ ಧಾರ್ಮಿಕ ಮಂದಿರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.

ಹೀಗಾಗಿ ತಿರುಪತಿ ತಿಮ್ಮಪ್ಪನ ದೇವಾಲಯದ ಬಾಗಿಲು ಜೂನ್ 8ರಿಂದ ತೆರೆಯಲಿದೆ ಎನ್ನಲಾಗಿದ್ದು, ಪ್ರತಿದಿನ 10 ಸಾವಿರ ಮಂದಿ ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗುತ್ತದೆ. ಅಲ್ಲದೆ ದೇವಾಲಯದಲ್ಲಿ ಥರ್ಮಲ್ ಸ್ಕ್ರೀನಿಂಗ್ ಮಾಡಿದ ಬಳಿಕವೇ ದರ್ಶನ ಭಾಗ್ಯ ಲಭಿಸಲಿದೆ.

ದೇವಾಲಯ ತೆರೆಯುವ ಹಿನ್ನೆಲೆಯಲ್ಲಿ ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು ಸ್ಯಾನಿಟೈಸೇಶನ್ ಮಾಡಲಾಗಿದೆ. ಜೊತೆಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಸಲುವಾಗಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...