alex Certify
ಕನ್ನಡ ದುನಿಯಾ       Mobile App
       

Kannada Duniya

ಮತದಾರರ ಪಟ್ಟಿಯಿಂದ ಪ್ರಿಯಾಂಕಾ ಹೆಸರು ಡಿಲಿಟ್

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರ ಹೆಸರನ್ನು ಬರೇಲಿ ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಮುಂಬೈಗೆ ತೆರಳಿದ 17 ವರ್ಷಗಳ ಬಳಿಕ ಪ್ರಿಯಾಂಕಾ ಚೋಪ್ರಾ ಮತ್ತು ಅವರ ತಾಯಿ ಮಧು ಚೋಪ್ರಾ ಅವರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ.

ಮಿಸ್ ವರ್ಲ್ಡ್ ಪ್ರಶಸ್ತಿ ಗಳಿಸಿದ ನಂತರದಲ್ಲಿ ಪ್ರಿಯಾಂಕಾ ಚೋಪ್ರಾ ಕುಟುಂಬ ಮುಂಬೈನಲ್ಲಿ ನೆಲೆಸಿದೆ. ಬರೇಲಿಯ ವಾರ್ಡ್ ಸಂಖ್ಯೆ 56 ರ ಮತದಾರರ ಪಟ್ಟಿಯಲ್ಲಿದ್ದ ಅವರ ಹೆಸರನ್ನು ತೆಗೆಯಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಕ್ಯಾಪ್ಟನ್ ಆರ್. ವಿಕ್ರಮ್ ಸಿಂಗ್ ಮಾಹಿತಿ ನೀಡಿದ್ದಾರೆ.

ಸ್ಥಳೀಯ ನಿವಾಸಿಯೊಬ್ಬರು ಪ್ರಿಯಾಂಕಾ ಚೋಪ್ರಾ ಕುಟುಂಬ ವಾಸಿಸದಿರುವ ಕುರಿತು ಮಾಹಿತಿ ನೀಡಿದ್ದು, ಚುನಾವಣೆ ವಿಭಾಗದ ಬ್ಲಾಕ್ ಲೆವೆಲ್ ಆಫೀಸರ್ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಿದ್ದರು. ಅದರಂತೆ ಪ್ರಿಯಾಂಕಾ ಮತ್ತು ಅವರ ತಾಯಿಯ ಹೆಸರನ್ನು ಕೈಬಿಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...