alex Certify
ಕನ್ನಡ ದುನಿಯಾ       Mobile App
       

Kannada Duniya

65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಶ್ರೀದೇವಿ ಅತ್ಯುತ್ತಮ ನಟಿ

65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದೆ. ಬಾಲಿವುಡ್ ನಟ ರಾಜ್ಕುಮಾರ್ ರಾವ್ ಅಭಿನಯದ ನ್ಯೂಟನ್ ಅತ್ಯುತ್ತಮ ಹಿಂದಿ ಚಿತ್ರ ಪ್ರಶಸ್ತಿ ಗಿಟ್ಟಿಸಿಕೊಂಡಿದೆ. ದಿವಂಗತ ನಟಿ ಶ್ರೀದೇವಿಗೆ ಮಾಮ್ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ.

ನಟ ವಿನೋದ್ ಖನ್ನಾರಿಗೆ ಮರಣೋತ್ತರದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗುವುದು. ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಿತಿ ಅಧ್ಯಕ್ಷ ಮತ್ತು ನಿರ್ದೇಶಕ ಶೇಖರ್ ಕಪೂರ್ ಈ ಪ್ರಶಸ್ತಿಗಳ ಘೋಷಣೆ ಮಾಡಿದ್ದಾರೆ. ಎಲ್ಲ ವಿಜೇತರಿಗೆ ಮೇ 3 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.

ರಿಧಿ ಸೇನ್ ಗೆ Nagarkirtan ಚಿತ್ರಕ್ಕೆ ಉತ್ತಮ ನಟ ಪ್ರಶಸ್ತಿ ಲಭಿಸಿದೆ. ಜಯರಾಜ್ ಗೆ ಉತ್ತಮ ನಿರ್ದೇಶನ ಪ್ರಶಸ್ತಿ ಲಭಿಸಿದ್ರೆ, ಸಶಾಗೆ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿ ಲಭಿಸಿದೆ. ಬಾಹುಬಲಿ 2 ಚಿತ್ರಕ್ಕೆ ಬೆಸ್ಟ್ ಆಕ್ಷ್ಯನ್ ಡೈರೆಕ್ಷನ್ ಪ್ರಶಸ್ತಿ ಸಿಕ್ಕಿದೆ. ಮೋರಕ್ಯಾ ಮಕ್ಕಳ ಅತ್ಯುತ್ತಮ ಚಿತ್ರವಾಗಿ ಹೊರ ಹೊಮ್ಮಿದೆ.

 

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...