alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ ನಟ, ನಟಿ ದುರಂತ ಸಾವು

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಸೋಲೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಕಿರುತೆರೆ ನಟಿ ಹಾಗೂ ನಟ ಸಾವನ್ನಪ್ಪಿದ್ದಾರೆ.

ಮಹಾನದಿ, ತ್ರಿವೇಣಿ ಸಂಗಮ, ಮಧುಬಾಲಾ ಧಾರಾವಾಹಿಯಲ್ಲಿ ಅಭಿನಯಿಸಿದ್ದ ನಟಿ ರಚನಾ(23) ಹಾಗೂ ಸಹನಟ ಜೀವನ್ ಮೃತಪಟ್ಟವರು.

ಸಹನಟ ಕಾರ್ತಿಕ್ ಹುಟ್ಟುಹಬ್ಬದ ನಿಮಿತ್ತ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಫಾರಿ ಕಾರಿನಲ್ಲಿ 7 ಮಂದಿ ಹೊರಟಿದ್ದಾರೆ. ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48 ರ ಲ್ಯಾಂಕೊಟೋಲ್ ರಸ್ತೆ ಸೋಲೂರು ಬಳಿ ನಿಂತಿದ್ದ ಟ್ಯಾಂಕರ್ ಗೆ ಕಾರ್ ಡಿಕ್ಕಿ ಹೊಡೆದಿದೆ.

ರಚನಾ ಮತ್ತು ಜೀವನ್ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರ್ತಿಕ್, ರಂಜಿತ್, ಉತ್ತಮ್, ಹೊನ್ನೇಶ್ ಎಂಬುವವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಕುದೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...