alex Certify
ಕನ್ನಡ ದುನಿಯಾ       Mobile App
       

Kannada Duniya

ಲಿವ್ ಇನ್ ಸಂಗಾತಿ ಮೇಲೆ ಹಲ್ಲೆ ನಡೆಸಿದ್ದ ನಟ ಅರೆಸ್ಟ್

ತನ್ನ ಲಿವ್ ಇನ್ ಸಂಗಾತಿ ಮೇಲೆ ಹಲ್ಲೆ ನಡೆಸಿದ್ದ ಬಾಲಿವುಡ್ ನಟ ಅರ್ಮಾನ್ ಕೊಹ್ಲಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಜೂನ್ 3 ರಂದು ಅರ್ಮಾನ್ ಕೊಹ್ಲಿ, ತನ್ನ ಲಿವ್ ಇನ್ ಸಂಗಾತಿ ನೀರೂ ರಾಂಡ್ವಾ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದು, ಈ ಸಂಬಂಧ ಸಾಂತಾಕ್ರೂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವೃತ್ತಿಯಲ್ಲಿ ಫ್ಯಾಷನ್ ಡಿಸೈನರ್ ಆಗಿರುವ ನೀರೂ ರಾಂಡ್ವಾ, 2015 ರಿಂದಲೂ ಅರ್ಮಾನ್ ಕೊಹ್ಲಿ ಜೊತೆ ಲಿವ್ ಇನ್ ನಲ್ಲಿದ್ದು, ಇಬ್ಬರ ನಡುವೆ ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳದಲ್ಲಿ ಈ ಹಲ್ಲೆ ನಡೆದಿದೆ ಎನ್ನಲಾಗಿದೆ.

ನೀರೂ ರಾಂಡ್ವಾಳನ್ನು ಮೆಟ್ಟಿಲ ಮೇಲಿನಿಂದ ಅರ್ಮಾನ್ ತಳ್ಳಿದ್ದು, ಇದರಿಂದ ತಲೆಗೆ ತೀವ್ರ ಗಾಯವಾಗಿತ್ತು. ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದ ನೀರೂ ತಲೆಗೆ 15 ಹೊಲಿಗೆಗಳನ್ನು ಹಾಕಲಾಗಿದ್ದು, ಗಾಯದ ಕಲೆ ಶಾಶ್ವತವಾಗಿರಲಿದೆ ಎಂದು ವೈದ್ಯರು ಹೇಳಿದ್ದರು. ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ನೀರೂ ಪೊಲೀಸರಿಗೆ ದೂರು ನೀಡಿದ್ದು, ಈ ಹಿನ್ನಲೆಯಲ್ಲಿ ಅರ್ಮಾನ್ ಕೊಹ್ಲಿಯ ಬಂಧನವಾಗಿದೆ. ಈ ಹಿಂದೆ ‘ಬಿಗ್ ಬಾಸ್’ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಅರ್ಮಾನ್, ಅಲ್ಲಿಯೂ ತಮ್ಮ ಅತಿರೇಕದ ವರ್ತನೆಗೆ ಸಹ ಸ್ಪರ್ಧಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...