alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ಯಾಚಾರ ಆರೋಪ ಹೊತ್ತ ನಟನಿಗೆ ಮತ್ತೊಂದು ಶಾಕ್

ಬೆಂಗಳೂರು: ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊತ್ತಿರುವ ‘ಹೊಂಬಣ್ಣ’ ಚಿತ್ರದ ನಟ ಸುಬ್ರಹ್ಮಣ್ಯ ಅವರಿಗೆ ಮತ್ತೊಂದು ಸಂಕಷ್ಟು ಎದುರಾಗಿದೆ.

ಸುಬ್ರಹ್ಮಣ್ಯ ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡಲು ಫಿಲ್ಮ್ ಚೇಂಬರ್ ತೀರ್ಮಾನಿಸಿದೆ. 1 ವಾರದೊಳಗೆ ಅವರು ಮಾಹಿತಿ ನೀಡಬೇಕು. ಸ್ಪಂದಿಸಿ ತಪ್ಪನ್ನು ಒಪ್ಪಿಕೊಳ್ಳದಿದ್ದರೆ ಕೆಲವು ವರ್ಷಗಳ ಕಾಲ ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡಲು ತೀರ್ಮಾನ ಕೈಗೊಳ್ಳಲಾಗುವುದು ಎಂದು ಫಿಲ್ಮ್ ಚೇಂಬರ್ ಅಧ್ಯಕ್ಷ ಸಾ.ರಾ. ಗೋವಿಂದು ತಿಳಿಸಿದ್ದಾರೆ.

ಸುಬ್ರಹ್ಮಣ್ಯ ಅವರು ಪಾನೀಯದಲ್ಲಿ ಮತ್ತು ಬರಿಸುವ ಪದಾರ್ಥ ಬೆರೆಸಿ ಅತ್ಯಾಚಾರ ಎಸಗಿದ್ದಾಗಿ ಯುವತಿ ಆರೋಪಿಸಿದ್ದು, ಬೆಂಗಳೂರು ಬಸವನಗುಡಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

ಆದರೆ, ಸುಬ್ರಹ್ಮಣ್ಯ ಅಂತಹ ವ್ಯಕ್ತಿಯಲ್ಲ ಎಂದು ಅವರ ಸ್ನೇಹಿತರು ಹೇಳಿದ್ದು, ಸುಬ್ರಹ್ಮಣ್ಯ ಕೂಡ ಆರೋಪವನ್ನು ನಿರಾಕರಿಸಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...