alex Certify
ಕನ್ನಡ ದುನಿಯಾ       Mobile App
       

Kannada Duniya

ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿ ಸಿಕ್ಕಿಬಿದ್ದ ಖ್ಯಾತ ನಟ

ಕುಡಿದ ಅಮಲಿನಲ್ಲಿ ಕಾರು ಚಲಾಯಿಸುತ್ತಿದ್ದ ಖ್ಯಾತ ನಟನೊಬ್ಬ ಆಟೋರಿಕ್ಷಾ ಒಂದಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಪರಾರಿಯಾಗುವ ಯತ್ನ ನಡೆಸಿದ ವೇಳೆ ಹಿಡಿದ ಸಾರ್ವಜನಿಕರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಭಾನುವಾರ ರಾತ್ರಿ ಮುಂಬೈನಲ್ಲಿ ಈ ಘಟನೆ ನಡೆದಿದ್ದು, ನಟ ದಲೀಪ್ ತಾಹೀಲ್ ತಮ್ಮ ಇಬ್ಬರು ಸ್ನೇಹಿತರೊಂದಿಗೆ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಆಟೋರಿಕ್ಷಾ ಒಂದಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ.

ಬಳಿಕ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಗಣಪತಿ ವಿಸರ್ಜನಾ ಮೆರವಣಿಗೆ ಎದುರಾದ ಕಾರಣ ಸಾಧ್ಯವಾಗಿಲ್ಲ. ದಲೀಪ್ ತಾಹೀಲ್ ಮತ್ತವರ ಸ್ನೇಹಿತರನ್ನು ಹಿಡಿದ ಸಾರ್ವಜನಿಕರು ಪೊಲೀಸರ ವಶಕ್ಕೆ ನೀಡಿದ್ದು, ಇವರುಗಳನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಮದ್ಯ ಸೇವಿಸಿರುವುದು ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...