alex Certify
ಕನ್ನಡ ದುನಿಯಾ       Mobile App
       

Kannada Duniya

ಕುದುರೆ ಮೇಲಿಂದ ಬಿದ್ದ ನಟ: ಅಪಾಯದಿಂದ ಪಾರು

ಬೆಂಗಳೂರು: ಶ್ರೀಮನ್ನಾರಾಯಣ ಚಿತ್ರದ ಶೂಟಿಂಗ್ ವೇಳೆ ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ಕುದುರೆ ಮೇಲಿನಿಂದ ಬಿದ್ದು, ಪ್ರಾಣಾಪಾಯದಿಂದ ಪಾರಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಂಠೀರವ ಸ್ಟುಡಿಯೋದಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಈ ವೇಳೆ ರಕ್ಷಿತ್ ಶೆಟ್ಟಿ ಕುದುರೆ ಮೇಲೆ ಕುಳಿತು ಸವಾರಿ ಮಾಡುತ್ತಿದ್ದಾಗ, ಕುದುರೆ ಏಕಾಏಕಿ ಕೆನೆದು ನಿಂತಿದೆ. ಆಗ ಆಯಾ ತಪ್ಪಿ ರಕ್ಷಿತ್ ಶೆಟ್ಟಿ ಹಾಗೂ ಕುದುರೆ ನೆಲದ ಮೇಲೆ ಹಿಮ್ಮುಖವಾಗಿ ಬಿದ್ದಿದ್ದಾರೆ. ಘಟನೆಯಲ್ಲಿ ರಕ್ಷಿತ್ ಶೆಟ್ಟಿ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಮೂರು ವಾರಗಳ ಹಿಂದೆ ನಡೆದ ಅವಘಡ ಈಗ ಬೆಳಕಿಗೆ ಬಂದಿದ್ದು, ನಟ ರಕ್ಷಿತ್ ಶೆಟ್ಟಿ ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ, ತಾವು ಆರಾಮವಾಗಿರುವುದಾಗಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...