alex Certify
ಕನ್ನಡ ದುನಿಯಾ       Mobile App
       

Kannada Duniya

ಹೊಸದುರ್ಗದಲ್ಲಿ ಜೆ.ಡಿ.ಎಸ್. ನಿಂದ ಶಶಿಕುಮಾರ್ ಸ್ಪರ್ಧೆ

ಕಾಂಗ್ರೆಸ್ ಟಿಕೆಟ್ ಗಾಗಿ ಪ್ರಯತ್ನ ನಡೆಸಿದ್ದ ನಟ, ಮಾಜಿ ಸಂಸದ ಶಶಿಕುಮಾರ್ ಜೆ.ಡಿ.ಎಸ್.ಗೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಜೆ.ಡಿ.ಎಸ್. ವರಿಷ್ಠ ಹೆಚ್.ಡಿ. ದೇವೇಗೌಡರ ನಿವಾಸದಲ್ಲಿ ಪಕ್ಷಕ್ಕೆ ಸೇರ್ಪಡೆಯಾದ ಅವರು ಹೊಸದುರ್ಗದಲ್ಲಿ ಸ್ಪರ್ಧೆಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದ ಶಶಿಕುಮಾರ್ ಚಿತ್ರದುರ್ಗ ಜಿಲ್ಲೆಯ ಯಾವುದಾದರೂ ಕ್ಷೇತ್ರದಲ್ಲಿ ಸ್ಪರ್ಧೆಗೆ ಅವಕಾಶ ನೀಡಬೇಕೆಂದು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದರು. ನಾಯಕರ ಸೂಚನೆ ಮೇರೆಗೆ ಜಿಲ್ಲೆಯಲ್ಲಿ ಸಿದ್ಧತೆಯನ್ನೂ ನಡೆಸಿದ್ದರು. ಆದರೆ, ಅವರಿಗೆ ಟಿಕೆಟ್ ಕೈತಪ್ಪಿದೆ.

ಇದರಿಂದ ಅಸಮಾಧಾನಗೊಂಡ ಅವರು ಜೆ.ಡಿ.ಎಸ್.ಗೆ ಸೇರ್ಪಡೆಯಾಗಿದ್ದು, ಹೊಸದುರ್ಗ ಕ್ಷೇತ್ರದಲ್ಲಿ ಕಣಕ್ಕಿಳಿಯಲು ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...