alex Certify
ಕನ್ನಡ ದುನಿಯಾ       Mobile App
       

Kannada Duniya

ನಟಿ ಜಿಯಾ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್…!

ಬಾಲಿವುಡ್ ನಟಿ ಜಿಯಾ ಖಾನ್ ಆತ್ಮಹತ್ಯೆ ಪ್ರಕರಣದಲ್ಲಿ ಹಿರಿಯ ನಟ ಆದಿತ್ಯ ಪಾಂಚೋಲಿ ಪುತ್ರ ಸೂರಜ್ ಪಾಂಚೋಲಿ ವಿರುದ್ದ ಆತ್ಮಹತ್ಯೆಗೆ ಪ್ರೇರೇಪಣೆ ನೀಡಿದ ಕುರಿತು ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ.

ತಾನು ಅಮಾಯಕ ಎಂದು ಸೂರಜ್ ಪಾಂಚೋಲಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದು, ಮುಂಬೈ ಸೆಷನ್ಸ್ ನ್ಯಾಯಾಲಯದಲ್ಲಿ ಫೆಬ್ರವರಿ 14 ರಿಂದ ಸಾಕ್ಷಿಗಳ ವಿಚಾರಣೆ ಆರಂಭವಾಗಲಿದೆ.

2013 ರ ಜೂನ್ 3 ರಂದು ಜಿಯಾ ಖಾನ್ ಜುಹುನಲ್ಲಿರುವ ತನ್ನ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದು, ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದ ಜಿಯಾ ಖಾನ್ ರ ತಾಯಿ ರಬಿಯಾ ಖಾನ್, ಇದಕ್ಕೆ ಸೂರಜ್ ಪಾಂಚೋಲಿ ಕಾರಣವೆಂದು ದೂರಿದ್ದರು.

2013 ರ ಅಕ್ಟೋಬರ್ ನಲ್ಲಿ ಬಾಂಬೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ರಬಿಯಾ ಖಾನ್, ತಮ್ಮ ಪುತ್ರಿಯನ್ನು ಹತ್ಯೆ ಮಾಡಲಾಗಿರುವ ಕಾರಣ ಪ್ರಕರಣದ ತನಿಖೆಯನ್ನು ಸಿಬಿಐ ಗೆ ವಹಿಸಬೇಕೆಂದು ಮನವಿ ಮಾಡಿದ್ದರು. ನ್ಯಾಯಾಲಯ ಇದನ್ನು ಪುರಸ್ಕರಿಸಿ ಸಿಬಿಐ ತನಿಖೆಗೆ ಆದೇಶಿಸಿತ್ತು.

ಪ್ರಕರಣವನ್ನು ಕೈಗೆತ್ತಿಕೊಂಡ ಸಿಬಿಐ, ವಿಚಾರಣೆ ವೇಳೆ ಆದಿತ್ಯ ಪಾಂಚೋಲಿ ಸತ್ಯಾಂಶವನ್ನು ಮುಚ್ಚಿಡುತ್ತಿದ್ದಾರೆಂದು ಹೇಳಿತ್ತಲ್ಲದೇ ಬ್ರೈನ್ ಮ್ಯಾಪಿಂಗ್ ಟೆಸ್ಟ್ ಗೆ ಒಳಪಡಲು ಹೇಳಿದ್ದರೂ ಆದಿತ್ಯ ಇದಕ್ಕೆ ನಿರಾಕರಿಸಿದ್ದ.

ಜಿಯಾ ಖಾನ್ ಬರೆದಿದ್ದರೆನ್ನಲಾದ ಡೆತ್ ನೋಟ್ ಸಿಕ್ಕಿದ್ದು, ಇದರಲ್ಲಿ ತಾನು ಆದಿತ್ಯ ಜೊತೆ ಹೊಂದಿದ್ದ ಸಂಬಂಧ, ಆತನ ಕಿರುಕುಳದ ಕುರಿತು ಜಿಯಾ ಖಾನ್ ಹೇಳಿಕೊಂಡಿದ್ದರೆನ್ನಲಾಗಿದೆ. ಜಿಯಾ ಖಾನ್ ರದ್ದು ಕೊಲೆಯಲ್ಲ ಆತ್ಮಹತ್ಯೆ ಎಂಬ ತೀರ್ಮಾನಕ್ಕೆ ಬಂದಿರುವ ಸಿಬಿಐ, ಆದಿತ್ಯ ಪಾಂಚೋಲಿ ವಿರುದ್ದ ಆತ್ಮಹತ್ಯೆಗೆ ಪ್ರೇರೇಪಣೆ ನೀಡಿದ ಚಾರ್ಜ್ ಶೀಟ್ ಸಲ್ಲಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...