alex Certify
ಕನ್ನಡ ದುನಿಯಾ       Mobile App
       

Kannada Duniya

ಜಯಲಲಿತಾ ಕ್ಷೇತ್ರದಿಂದ ನಟ ವಿಶಾಲ್ ಸ್ಪರ್ಧೆ: ನಾಳೆ ನಾಮಪತ್ರ ಸಲ್ಲಿಕೆ

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್, ಕಮಲ್ ಹಾಸನ್ ರಾಜಕೀಯಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದು, ಇವರಿಬ್ಬರಿಗಿಂತ ಮೊದಲೇ ನಟ ವಿಶಾಲ್ ರಾಜಕೀಯಕ್ಕೆ ಎಂಟ್ರಿ ಕೊಡ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಅವರು ಪ್ರತಿನಿಧಿಸಿದ್ದ ಚೆನ್ನೈ ಆರ್.ಕೆ. ನಗರ ವಿಧಾನಸಭೆ ಕ್ಷೇತ್ರಕ್ಕೆ ಉಪ ಚುನಾವಣೆ ನಿಗದಿಯಾಗಿದ್ದು, ವಿಶಾಲ್ ಸ್ಪರ್ಧಿಸಲಿದ್ದಾರೆ.

ಈ ಕ್ಷೇತ್ರದಲ್ಲಿ ಆಡಳಿತ ಪಕ್ಷ ಎ.ಐ.ಎ.ಡಿ.ಎಂ.ಕೆ. ಅಭ್ಯರ್ಥಿಯಾಗಿ ಇ. ಮಧುಸೂದನನ್, ಡಿ.ಎಂ.ಕೆ. ಅಭ್ಯರ್ಥಿಯಾಗಿ ಎನ್. ಮರುದು ಗಣೇಶ್, ಬಿ.ಜೆ.ಪಿ. ಅಭ್ಯರ್ಥಿಯಾಗಿ ಕೆ. ನಾಗರಾಜನ್ ಕಣಕ್ಕಿಳಿಯುತ್ತಿದ್ದು, ಟಿ.ಟಿ.ವಿ. ದಿನಕರನ್ ಕೂಡ ಸ್ಪರ್ಧಿಸುತ್ತಿದ್ದಾರೆ. ಇವರ ನಡುವೆ ನಟ ವಿಶಾಲ್ ಕೂಡ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ತಮಿಳು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ, ದಕ್ಷಿಣ ಭಾರತ ಕಲಾವಿದರ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿರುವ ವಿಶಾಲ್ ಅಪಾರ ಅಭಿಮಾನಿ ವರ್ಗವನ್ನು ಹೊಂದಿದ್ದಾರೆ. ಡಿಸೆಂಬರ್ 4 ರಂದು ಆರ್.ಕೆ. ನಗರ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದಾಗಿ ವಿಶಾಲ್ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...