alex Certify
ಕನ್ನಡ ದುನಿಯಾ       Mobile App
       

Kannada Duniya

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಯೋಗಿ

ಲೂಸ್ ಮಾದ ಖ್ಯಾತಿಯ ನಟ ಯೋಗಿ ಇಂದು ಬೆಳಗ್ಗೆ ಕೋಣನಕುಂಟೆಯ ಶ್ರೀ ಕನ್ವೆನ್ಷನ್ ಹಾಲ್ ನಲ್ಲಿ ಬಾಲ್ಯದ ಗೆಳತಿ ಸಾಹಿತ್ಯ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಬೆಳಗಿನಜಾವ ನಡೆದ ಮುಹೂರ್ತದಲ್ಲಿ ಕುಟುಂಬದವರು, ಬಂಧುಗಳು ಹಾಗೂ ಚಿತ್ರರಂಗದ ಕಲಾವಿದರು ಭಾಗವಹಿಸಿದ್ದರು.

ಯೋಗಿ ಹಾಗೂ ಸಾಹಿತ್ಯ ಒಟ್ಟಿಗೆ ಓದಿದವರಾಗಿದ್ದು, ಇವರಿಬ್ಬರು ಅನೇಕ ವರ್ಷಗಳಿಂದ ಪ್ರೀತಿಸಿದ್ದರು. ಕಳೆದ ಜೂನ್ ನಲ್ಲಿ ನಿಶ್ಚಿತಾರ್ಥ ನೆರವೇರಿಸಿಕೊಂಡಿದ್ದ ಜೋಡಿ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ.

ಸಂಜೆ ಆರತಕ್ಷತೆ ಸಮಾರಂಭ ನಡೆಯಲಿದ್ದು, ಚಿತ್ರರಂಗ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ನವದಂಪತಿಗೆ ಶುಭ ಹಾರೈಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...