alex Certify
ಕನ್ನಡ ದುನಿಯಾ       Mobile App
       

Kannada Duniya

ಮಾಧ್ಯಮಗಳ ವಿರುದ್ದ ಕಿಡಿ ಕಾರಿದ ಖ್ಯಾತ ನಟ

dileep-223ಕಳೆದ ಶುಕ್ರವಾರ ಕೇರಳದ ಕೊಚ್ಚಿಯಲ್ಲಿ ಬಹು ಭಾಷಾ ನಟಿಯೊಬ್ಬರ ಮೇಲೆ ನಡೆದಿದ್ದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಪದೇ ಪದೇ ತಮ್ಮ ಹೆಸರನ್ನು ಎಳೆದು ತರುತ್ತಿರುವುದಕ್ಕೆ ಮಲಯಾಳಂ ನ ಖ್ಯಾತ ನಟ ದಿಲೀಪ್, ಮಾಧ್ಯಮಗಳ ವಿರುದ್ದ ಗರಂ ಆಗಿದ್ದಾರೆ.

ಇತ್ತೀಚೆಗಷ್ಟೇ ನಟಿ ಕಾವ್ಯಾ ಮಾಧವನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ನಟ ದಿಲೀಪ್, ಕೆಲ ಮಾಧ್ಯಮಗಳು ನಟಿ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ತಮ್ಮ ಹೆಸರು ಪ್ರಸ್ತಾಪಿಸುತ್ತಿರುವುದಕ್ಕೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಕಿಡಿ ಕಾರಿದ್ದಾರಲ್ಲದೇ ಈ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲವೆಂದಿದ್ದಾರೆ.

ಪತ್ರಿಕೆಗಳಲ್ಲಿ ವರದಿಯಾಗಿದ್ದಂತೆ ತನಿಖೆಗಾಗಿ ಯಾವುದೇ ಪೊಲೀಸರು ನನ್ನ ಮನೆಗೆ ಬಂದಿಲ್ಲ. ಕಡೆ ಪಕ್ಷ ಫೋನ್ ಕಾಲ್ ಸಹ ಮಾಡಿಲ್ಲ. ಹೀಗಿದ್ದರೂ ಮನೆಗೆ ಪೊಲೀಸರು ಭೇಟಿ ನೀಡಿದ್ದರೆಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿರುವುದರಲ್ಲಿ ಯಾವುದೇ ಹುರುಳಿಲ್ಲವೆಂದಿದ್ದಾರೆ. ಪ್ರಕರಣದಲ್ಲಿ ಹೆಸರು ಕೇಳಿ ಬರುತ್ತಿರುವ ಆರೋಪಿಗಳ ಜೊತೆ ತಮಗೆ ಯಾವುದೇ ಸಂಪರ್ಕವಿಲ್ಲವೆಂದು ದಿಲೀಪ್ ಸ್ಪಷ್ಟಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...