alex Certify
ಕನ್ನಡ ದುನಿಯಾ       Mobile App
       

Kannada Duniya

ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ನಟಿ ಮೇಲೆ ಹಲ್ಲೆ

ಬೆಂಗಳೂರು: ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಸ್ಯಾಂಡಲ್ ವುಡ್ ನಟಿ ಮೇಲೆ ಪತಿಯೇ ಹಲ್ಲೆ ಮಾಡಿ ಹಿಂಸೆ ನೀಡಿದ ಆರೋಪ ಕೇಳಿ ಬಂದಿದೆ.

ನಟಿ ಚೈತ್ರಾ ಅವರಿಗೆ ಪತಿ ಪೋತರಾಜ್ ದೈಹಿಕ, ಮಾನಸಿಕ ಹಿಂಸೆ ನೀಡಿದ್ದಾರೆ ಎನ್ನಲಾಗಿದ್ದು, ಬಸವನಗುಡಿ ಮಹಿಳಾ ಠಾಣೆ ಪೊಲೀಸರಿಗೆ ದೂರು ನೀಡಲಾಗಿದೆ.

‘ಖುಷಿ’ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದ ಚೈತ್ರಾ 2006 ರಲ್ಲಿ ಮದುವೆಯಾಗಿದ್ದಾರೆ. ಅವರ ಪತಿ ಬಾಲಾಜಿ ಪೋತರಾಜ್ ಇತ್ತೀಚೆಗೆ ಬೇರೆ ಯುವತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಿದ್ದಾರೆ.

2 ನೇ ಮಗುವಾದಾಗಿನಿಂದಲೂ ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಬಾಲಾಜಿ ಆಗಾಗ ದೈಹಿಕ, ಮಾನಸಿಕ ಕಿರುಕುಳ ನೀಡಿದ್ದು, ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಮನೆ ಬಿಟ್ಟು ಹೋಗುವಂತೆ ಥಳಿಸಿದ್ದಾರೆ. ನೊಂದ ಚೈತ್ರಾ ಮಾರ್ಚ್ 17 ರಂದು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾದ ಬಳಿಕ ಬಾಲಾಜಿ ನಾಪತ್ತೆಯಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...