alex Certify
ಕನ್ನಡ ದುನಿಯಾ       Mobile App
       

Kannada Duniya

‘ಬಿಗ್ ಬಾಸ್’ ಸ್ಪರ್ಧಿ ಸಂಜನಾ ಮದುವೆಯಂತೆ…!

‘ಬಿಗ್ ಬಾಸ್’ ಸೀಸನ್ 4 ರಲ್ಲಿ ಸ್ಪರ್ಧಿಯಾಗಿದ್ದ ಸಂಜನಾ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಧಾರಾವಾಹಿ, ಸಿನಿಮಾಗಳಲ್ಲಿ ನಟಿಸಿರುವ ಸಂಜನಾ ‘ಬಿಗ್ ಬಾಸ್’ ಮನೆಯಲ್ಲಿ ಭುವನ್ ರೊಂದಿಗೆ ಆತ್ಮೀಯರಾಗಿದ್ದರು. ಅಲ್ಲಿಂದ ಹೊರ ಬಂದ ಬಳಿಕ ಅವರೊಂದಿಗೆ ‘ಸಂಜು ಮತ್ತು ನಾನು’ ಧಾರಾವಾಹಿಯಲ್ಲಿ ಅಭಿನಯಿಸಿದ್ದಾರೆ.

ಸಂಜನಾ –ಭುವನ್ ಮದುವೆಯಾಗಲಿದ್ದಾರೆ ಎಂದು ಸುದ್ದಿಯಾಗಿತ್ತಾದರೂ, ಇಬ್ಬರೂ ಅದನ್ನು ನಿರಾಕರಿಸಿದ್ದರು. ಸಂಜನಾ ತಮ್ಮ ಗೆಳೆಯ ಗೌರವ್ ರಾಯ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಗೌರವ್ ರಾಯ್ ಖಾಸಗಿ ವಾಹಿನಿಯಲ್ಲಿ ಮಾರ್ಕೇಟಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. 3 ವರ್ಷಗಳಿಂದ ಇಬ್ಬರೂ ಪರಿಚಿತರಾಗಿದ್ದು, ಇವರ ಮದುವೆಗೆ ಎರಡೂ ಮನೆಯಲ್ಲಿ ಒಪ್ಪಿಗೆ ಸಿಕ್ಕಿದ್ದು, ಮುಂದಿನ ವರ್ಷ ನಿಶ್ಚಿತಾರ್ಥ, ಮದುವೆ ನಡೆಯಲಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...