alex Certify
ಕನ್ನಡ ದುನಿಯಾ       Mobile App
       

Kannada Duniya

ಸಾಗರ ಕ್ಷೇತ್ರದ ಟಿಕೇಟ್ ಗೆ ನಟಿ ಜಯಮಾಲಾ ಬೇಡಿಕೆ

ರಾಜ್ಯ ವಿಧಾನಸಭೆಗೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಎಲ್ಲ ಪ್ರಮುಖ ಪಕ್ಷಗಳಲ್ಲೂ ಟಿಕೇಟ್ ಗಾಗಿ ಲಾಬಿ ಆರಂಭವಾಗಿದೆ. ತಮಗನುಕೂಲಕರವಾದ ಕ್ಷೇತ್ರಗಳ ಕಡೆಗೆ ಆಕಾಂಕ್ಷಿಗಳು ಕಣ್ಣಿಟ್ಟಿದ್ದು, ಟಿಕೇಟ್ ಪಡೆಯಲು ಈಗಿನಿಂದಲೇ ವರಿಷ್ಟರ ಮೇಲೆ ಒತ್ತಡ ಹೇರಲಾರಂಭಿಸಿದ್ದಾರೆ.

ಕಂದಾಯ ಸಚಿವ ಕಾಗೋಡು ತಿಮ್ಮಪ್ಪನವರು ಪ್ರತಿನಿಧಿಸುತ್ತಿರುವ ಸಾಗರ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿರುವ ನಟಿ ಜಯಮಾಲಾ, ಈ ಬಾರಿ ಕಾಗೋಡು ತಿಮ್ಮಪ್ಪನವರು ಸ್ಪರ್ಧೆಯಿಂದ ಹಿಂದೆ ಸರಿದರೆ ತಮಗೇ ಟಿಕೇಟ್ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರ ಮುಂದೆ ಅಹವಾಲು ಮಂಡಿಸಿದ್ದಾರೆಂದು ಹೇಳಲಾಗಿದೆ.

ಕಾಗೋಡು ತಿಮ್ಮಪ್ಪನವರು ಈ ಬಾರಿ ಚುನಾವಣೆಗೆ ಸ್ಪರ್ಧಿಸದಿರಲು ತೀರ್ಮಾನಿಸಿದ್ದಾರೆಂದು ಹೇಳಲಾಗುತ್ತಿದ್ದು, ತಮ್ಮ ಪುತ್ರಿಗೆ ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಟಿಕೇಟ್ ಕೊಡಿಸಲು ಪ್ರಯತ್ನ ನಡೆಸುತ್ತಿದ್ದಾರೆನ್ನಲಾಗಿದೆ. ಈ ಮಧ್ಯೆ ನಟಿ ಜಯಮಾಲಾ, ತಿಮ್ಮಪ್ಪನವರು ಸ್ಪರ್ಧೆಯಿಂದ ಹಿಂದೆ ಸರಿದರೆ ತಮಗೇ ಟಿಕೇಟ್ ನೀಡಬೇಕೆಂಬ ಬೇಡಿಕೆ ಇಟ್ಟಿದ್ದು, ತಮ್ಮ ಗೆಲುವಿಗೆ ಪೂರಕವಾದ ಕಾರಣಗಳನ್ನು ವಿವರಿಸಿದ್ದಾರೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...