alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರು ಅಪಘಾತ; ನಟಿ ಪ್ರಣಿತಾ ಆಸ್ಪತ್ರೆಗೆ

Pranitha

ಹೈದರಾಬಾದ್: ತೆಲಂಗಾಣದಲ್ಲಿ ನಡೆದ ಅಪಘಾತದಲ್ಲಿ ಸ್ಯಾಂಡಲ್ ವುಡ್, ಟಾಲಿವುಡ್ ನಟಿ ಪ್ರಣಿತಾ ಗಾಯಗೊಂಡಿದ್ದಾರೆ. ಎದುರಿನಿಂದ ಬಂದ ಬೈಕ್ ಒಂದನ್ನು ತಪ್ಪಿಸಲು ಸಡನ್ ಬ್ರೇಕ್ ಹಾಕಿದ ಕಾರಣ ಪ್ರಣಿತಾ ಅವರಿದ್ದ ಕಾರ್ ಪಲ್ಟಿಯಾಗಿದೆ.

ಅದೃಷ್ಟವಶಾತ್ ಪ್ರಣಿತಾ ಅವರು ಅಪಾಯದಿಂದ ಪಾರಾಗಿದ್ದಾರೆ. ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದ ಪ್ರಣಿತಾ, ಶಂಷಾಬಾದ್ ವಿಮಾನ ನಿಲ್ದಾಣಕ್ಕೆ ಕಾರಿನಲ್ಲಿ ಹೊರಟಿದ್ದರು. ತೆಲಂಗಾಣದ ನಲಗೊಂಡ ಜಿಲ್ಲೆಯ ಗ್ರಾಮವೊಂದರ ಸಮೀಪ ಬೈಕ್ ಅಪಘಾತ ತಪ್ಪಿಸಲು ಹೋಗಿ ಕಾರ್ ಪಲ್ಟಿಯಾಗಿದ್ದು, ಪ್ರಣಿತಾ ಹಾಗೂ ಕಾರಿನ ಚಾಲಕ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿದ್ದ ಚಿತ್ರತಂಡದವರು ಅವರ ಕುಶಲೋಪರಿ ವಿಚಾರಿಸಿ ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲು ವ್ಯವಸ್ಥೆ ಮಾಡಿದ್ದಾರೆ ಎನ್ನಲಾಗಿದೆ. ಕನ್ನಡ, ತೆಲುಗು ಸಿನಿಮಾಗಳಲ್ಲಿ ಪ್ರಣಿತಾ ನಟಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...