alex Certify
ಕನ್ನಡ ದುನಿಯಾ       Mobile App
       

Kannada Duniya

ಬೇಬಿ ಬಂಪ್ ಫೋಟೋ ಶೇರ್ ಮಾಡಿದ ನಟಿ ರಂಭಾ

ಬಹುಭಾಷಾ ನಟಿ ರಂಭಾ ಈಗ ಗರ್ಭಿಣಿಯಾಗಿದ್ದಾರೆ. ಈಗಾಗಲೇ ಇಬ್ಬರು ಮಕ್ಕಳನ್ನು ಹೊಂದಿರುವ ರಂಭಾ ತಾವು ಮೂರನೇ ಬಾರಿಗೆ ಗರ್ಭಿಣಿಯಾಗಿರುವ ವಿಚಾರವನ್ನು ಬೇಬಿ ಬಂಪ್ ಫೋಟೋ ಶೇರ್ ಮಾಡುವ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ಕೆನಡಾ ಮೂಲದ ಉದ್ಯಮಿ ಇಂದ್ರನ್ ಪದ್ಮನಾಥನ್ ಅವರೊಂದಿಗೆ 2010 ರಲ್ಲಿ ವೈವಾಹಿಕ ಬದುಕಿಗೆ ಕಾಲಿಟ್ಟ ರಂಭಾ ಲಾನ್ಯಾ ಹಾಗೂ ಸಾಶಾ ಎಂಬ ಇಬ್ಬರು ಮಕ್ಕಳಿಗೆ ತಾಯಿಯಾಗಿದ್ದಾರೆ.

ಇದೀಗ ರಂಭಾ ಮೂರನೇ ಮಗುವಿಗೆ ಜನ್ಮ ನೀಡಲು ಮುಂದಾಗಿದ್ದು, ಫೋಟೋವನ್ನು ಶೇರ್ ಮಾಡುವ ಮೂಲಕ ಅಭಿಮಾನಿಗಳೊಂದಿಗೆ ತಮ್ಮ ಹರ್ಷವನ್ನು ಹಂಚಿಕೊಂಡಿದ್ದಾರೆ.

ಈ ಹಿಂದೆ ರಂಭಾ ತಮ್ಮ ಪತಿಯಿಂದ ವಿಚ್ಛೇದನ ಪಡೆಯುತ್ತಿದ್ದಾರೆ ಎಂಬ ವದಂತಿಗಳು ಹರಡಿದ್ದವು. ಇದಕ್ಕೆ ಪ್ರತಿಕ್ರಿಯಿಸಿದ ರಂಭಾ, ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿದ್ದರು.

ಕನ್ನಡ, ತಮಿಳು, ತೆಲುಗು, ಹಿಂದಿ, ಹಾಗೂ ಮಲಯಾಳಂ ಚಿತ್ರಗಳಲ್ಲಿ ರಂಭಾ ಅಭಿನಯಿಸಿದ್ದು, ತಮಿಳು ಚಿತ್ರರಂಗದ ಖ್ಯಾತ ನಟರಾದ ರಜನಿಕಾಂತ್  ಹಾಗೂ ಕಮಲಹಾಸನ್ ರ ಚಿತ್ರಗಳಲ್ಲೂ ಕಾಣಿಸಿಕೊಂಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...