alex Certify
ಕನ್ನಡ ದುನಿಯಾ       Mobile App
       

Kannada Duniya

ನಟಿ ಸೋನಾಲಿ ಬೇಂದ್ರೆಗೆ ಕ್ಯಾನ್ಸರ್

ಬಾಲಿವುಡ್ ನಟ ಇರ್ಫಾನ್ ಖಾನ್ ನಂತ್ರ ಬಾಲಿವುಡ್ ನಟಿ ಸೋನಾಲಿ ಬೇಂದ್ರೆ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಸೋನಾಲಿ ಈ ವಿಷ್ಯವನ್ನು ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳ ಮುಂದಿಟ್ಟಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿರುವ ಸೋನಾಲಿ ಬೇಂದ್ರೆ ಚಿಕಿತ್ಸೆಗಾಗಿ ನ್ಯೂಯಾರ್ಕ್ ಗೆ ತೆರಳಿದ್ದಾರಂತೆ.

ಬುಧವಾರ ಇನ್ಟ್ರಾಗ್ರಾಮ್ ನಲ್ಲಿ ಒಂದು ಪೋಸ್ಟ್ ಹಾಕಿರುವ ಸೋನಾಲಿ ತಾನು ಕ್ಯಾನ್ಸರ್ ನಿಂದ ಬಳಲುತ್ತಿದ್ದೇನೆ ಎಂದಿದ್ದಾರೆ. ಕ್ಯಾನ್ಸರ್ ವಿರುದ್ಧ ಹೋರಾಡಲು ನನ್ನ ಕುಟುಂಬ ಹಾಗೂ ಸ್ನೇಹಿತರು ಸಂಪೂರ್ಣ ಬೆಂಬಲ ನೀಡ್ತಿದ್ದಾರೆಂದು ಸೋನಾಲಿ ಹೇಳಿದ್ದಾರೆ. ಅಪಾಯಕಾರಿ ರೋಗದ ಮಧ್ಯೆಯೇ ತನಗೆ ಆತ್ಮವಿಶ್ವಾಸ ತುಂಬುತ್ತಿರುವ ಕುಟುಂಬ ಹಾಗೂ ಸ್ನೇಹಿತರಿಗೆ ಸೋನಾಲಿ ಧನ್ಯವಾದ ಹೇಳಿದ್ದಾರೆ.

ಸೋನಾಲಿ ಬೇಂದ್ರೆ ಇಂಡಿಯನ್ ಬೆಸ್ಟ್ ಡ್ರಾಮೆಬಾಜೆ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಂಡಿದ್ದರು. ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ಮಧ್ಯದಲ್ಲಿಯೇ ಸೋನಾಲಿ ಶೋ ಬಿಟ್ಟಿದ್ದಾರೆ. ಸೋನಾಲಿ ಬದಲು ಹುಮಾ ಕುರೇಶಿ ಜಡ್ಜ್ ಆಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...