alex Certify
ಕನ್ನಡ ದುನಿಯಾ       Mobile App
       

Kannada Duniya

ರದ್ದಾಯ್ತು ಅಲ್ಲು ಅರ್ಜುನ್ ಸಿನಿಮಾ ಶೂಟಿಂಗ್

dj-sinm-telu

ಬೇಲೂರು ಚನ್ನಕೇಶವ ದೇವಾಲಯದಲ್ಲಿ ಕಳೆದ 5 ದಿನಗಳಿಂದ ನಡೆಯುತ್ತಿದ್ದ, ತೆಲುಗು ಸಿನಿಮಾದ ಚಿತ್ರೀಕರಣವನ್ನು ಸ್ಥಗಿತಗೊಳಿಸಲಾಗಿದೆ.

ಖ್ಯಾತ ನಟ ಅಲ್ಲು ಅರ್ಜುನ್ ಅಭಿನಯದ ‘ದುವ್ವಾಡ ಜಗನ್ನಾಥಂ’(ಡಿಜೆ) ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ಇದಕ್ಕಾಗಿ ದೇವಾಲಯ ಆವರಣದಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ನಲ್ಲಿ ಕಂಬಗಳು, ಶಿವನ ಕಲಾಕೃತಿ ನಿರ್ಮಾಣ ಮಾಡಲಾಗಿತ್ತು.

ಚಿತ್ರೀಕರಣಕ್ಕೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ, ನೀಡಲಾಗಿದ್ದ ಅನುಮತಿಯನ್ನು ಪುರಾತತ್ವ ಇಲಾಖೆ ರದ್ದುಪಡಿಸಿದೆ.

ಚಿತ್ರೀಕರಣ ನಡೆಯುತ್ತಿರುವುದರಿಂದ ಪ್ರವಾಸಿಗರಿಗೆ ಪ್ರವೇಶ ನೀಡುತ್ತಿಲ್ಲ. ಇದರಿಂದ ಬೇಲೂರು ಚನ್ನಕೇಶವ ದೇವಾಲಯ ನೋಡಲು ಬರುವ ಪ್ರವಾಸಿಗರು ವಾಪಸ್ ಹೋಗುವಂತಾಗಿತ್ತು.

ವಿಷ್ಣುವಿನ ದೇವಾಲಯದಲ್ಲಿ ಶಿವನ ಮೂರ್ತಿಯನ್ನು ನಿರ್ಮಾಣ ಮಾಡಿದ್ದು ಕೂಡ ಕೆಲವರ ಅಸಮಾಧಾನಕ್ಕೆ ಕಾರಣವಾಗಿತ್ತು. ಕೇಂದ್ರ ಪುರಾತತ್ವ ಇಲಾಖೆಯಿಂದ ಮಾತ್ರ ಅನುಮತಿ ಪಡೆಯಲಾಗಿತ್ತೇ ವಿನಹ, ಜಿಲ್ಲಾಡಳಿತದಿಂದ ಅನುಮತಿ ಪಡೆದಿರಲಿಲ್ಲ.

ಅಲ್ಲದೇ ಉಗ್ರರ ಹಿಟ್ ಲಿಸ್ಟ್ ನಲ್ಲಿ ಚನ್ನಕೇಶವ ದೇವಾಲಯವಿದೆ ಎಂದು ಕೇಂದ್ರ ಗೃಹ ಇಲಾಖೆ ಎಚ್ಚರಿಕೆ ನೀಡಿದೆ. ಇವೇ ಮೊದಲಾದ ಕಾರಣಗಳಿಂದ ಚಿತ್ರೀಕರಣಕ್ಕೆ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ, ದೇವಾಲಯ ಆಡಳಿತ ಮಂಡಳಿ ಚಿತ್ರೀಕರಣಕ್ಕೆ ನೀಡಿದ್ದ ಅನುಮತಿಯನ್ನು ರದ್ದುಪಡಿಸಿದೆ. ಚಿತ್ರತಂಡ ಶೂಟಿಂಗ್ ಸ್ಥಗಿತಗೊಳಿಸಿದೆ ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...