alex Certify
ಕನ್ನಡ ದುನಿಯಾ       Mobile App
       

Kannada Duniya

ಟಿಕೆಟ್ ಸಿಕ್ಕರೂ ಬಿ ಫಾರಂ ಪಡೆಯಲು ಮುಂದಾಗದ ರೆಬೆಲ್ ಸ್ಟಾರ್

ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ದ ಮುನಿಸಿಕೊಂಡಿರುವ ರೆಬೆಲ್ ಸ್ಟಾರ್ ಅಂಬರೀಷ್, ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಸಿಕ್ಕರೂ ಬಿ ಫಾರಂ ಪಡೆಯಲು ಮುಂದಾಗಿರುವುದು ಕುತೂಹಲಕ್ಕೆಡೆ ಮಾಡಿದ್ದು, ಅಂಬರೀಷ್ ಅವರ ಮುಂದಿನ ನಡೆ ಏನು ಎಂಬುದು ಇನ್ನೂ ನಿಗೂಢವಾಗಿದೆ.

ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ವೇಳೆ ಅಂಬರೀಷ್, ಇತರೆ ಆಕಾಂಕ್ಷಿಗಳಂತೆ ಅರ್ಜಿ ಸಲ್ಲಿಸದಿದ್ದರೂ ಮಂಡ್ಯ ಕ್ಷೇತ್ರದಿಂದ ಅಂಬರೀಷ್ ಅವರಿಗೆ ಟಿಕೆಟ್ ಕೊಟ್ಟರೆ ಜಿಲ್ಲೆಯ ಇತರೆ ಕ್ಷೇತ್ರಗಳಲ್ಲೂ ಲಾಭವಾಗಬಹುದೆಂಬ ಲೆಕ್ಕಾಚಾರದ ಕಾರಣಕ್ಕೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.

ಆದರೆ ಮಂಡ್ಯ ಜಿಲ್ಲಾ ರಾಜಕಾರಣದಲ್ಲಿ ಪಕ್ಷದಲ್ಲಿನ ಕೆಲವರ ಹಸ್ತಕ್ಷೇಪದ ಕುರಿತು ಅಸಮಾಧಾನಗೊಂಡಿರುವ ಅಂಬರೀಷ್, ಇದನ್ನು ಹಲವು ಸಂದರ್ಭಗಳಲ್ಲಿ ಬಹಿರಂಗವಾಗೇ ಹೊರಗೆಡವಿದ್ದರು. ಬಳಿಕ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಅಂಬರೀಷ್ ಅವರ ಮನವೊಲಿಸುವ ಕಾರ್ಯ ಮಾಡಿದ್ದು, ನಿಮಗೇ ಟಿಕೆಟ್ ಎಂದು ಹೇಳಿದ್ದರು. ಅದರಂತೆ ಈಗ ಮಂಡ್ಯ ವಿಧಾನಸಭಾ ಕ್ಷೇತ್ರಕ್ಕೆ ಅಂಬರೀಷ್ ಅವರ ಹೆಸರನ್ನು ಘೋಷಣೆ ಮಾಡಲಾಗಿದ್ದು, ಆದರೆ ಚುನಾವಣೆಯಲ್ಲಿ ಸ್ಪರ್ಧೆ ಕುರಿತು ಅಂಬರೀಷ್ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಹಿನ್ನಲೆಯಲ್ಲಿ ಇಂದು ಸಚಿವ ಕೆ.ಜೆ. ಜಾರ್ಜ್ ಬೆಂಗಳೂರಿನ ಜೆ.ಪಿ. ನಗರದಲ್ಲಿರುವ ಅಂಬರೀಷ್ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆನ್ನಲಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಜಾರ್ಜ್, ಅಂಬರೀಷ್ ಅವರ ಮನವೊಲಿಸಲು ಯತ್ನಿಸಿದ್ದು, ಅಂಬರೀಷ್ ಯಾವ ನಿರ್ಧಾರ ಕೈಗೊಂಡಿದ್ದಾರೆಂಬುದು ಇನ್ನೂ ಬಹಿರಂಗವಾಗಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...