alex Certify
ಕನ್ನಡ ದುನಿಯಾ       Mobile App
       

Kannada Duniya

ಸೂಪರ್ ಸ್ಟಾರ್ ರಜನಿಗೆ ತಿರುಗೇಟು ಕೊಟ್ಟ ರೆಬಲ್ ಸ್ಟಾರ್ ಅಂಬರೀಶ್

ಬೆಂಗಳೂರು: ಕಾವೇರಿ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಕುರಿತಾಗಿ, ಸೂಪರ್ ಸ್ಟಾರ್ ರಜನಿಕಾಂತ್ ನೀಡಿರುವ ಹೇಳಿಕೆಗೆ ರಾಜ್ಯದಲ್ಲಿ ವಿರೋಧ ವ್ಯಕ್ತವಾಗಿದೆ.

ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ರಜನಿಕಾಂತ್ ಹೇಳಿಕೆ ಖಂಡಿಸಿ, ಕನ್ನಡ ಸಂಘಟನೆಗಳ ಕಾರ್ಯಕರ್ತರು ರಜನಿಕಾಂತ್ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದ್ದರು. ರಜನಿಕಾಂತ್ ಹೇಳಿಕೆಗೆ ಶಾಸಕ ಹಾಗೂ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ತಿರುಗೇಟು ನೀಡಿದ್ದಾರೆ.

ಸುಪ್ರೀಂ ಕೋರ್ಟ್ ತ್ರಿಸದಸ್ಯ ನೀಡಿರುವ ತೀರ್ಪಿನಿಂದ ತಮಿಳುನಾಡು ರೈತರಿಗೆ ಅನ್ಯಾಯವಾಗಿದೆ. ರೈತರಿಗೆ ಮಾರಕವಾಗಿರುವ ತೀರ್ಪು ಪುನರ್ ಪರಿಶೀಲನೆಗೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಬೇಕೆಂದು ರಜನಿಕಾಂತ್ ಹೇಳಿರುವುದಕ್ಕೆ ಅಂಬರೀಶ್ ಪ್ರತಿಕ್ರಿಯೆ ನೀಡಿದ್ದಾರೆ. ಕೋರ್ಟ್ ಗೆ ಹೋಗಲಿ ಗೊತ್ತಾಗುತ್ತೆ ಎಂದು ಖಾರವಾಗಿ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...