alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣೆಯಲ್ಲಿ ಸ್ಪರ್ಧೆ, ಗುಟ್ಟು ಬಿಡದ ಅಂಬಿ

ರಾಜ್ಯದಲ್ಲಿ ರಾಜಕೀಯ ಕಾವು ಏರತೊಡಗಿದ್ದು, ಈಗಾಗಲೇ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಅಭ್ಯರ್ಥಿಗಳು, ಆಕಾಂಕ್ಷಿಗಳು ಕ್ಷೇತ್ರದಲ್ಲಿ ಸುತ್ತಾಟ ನಡೆಸಿದ್ದಾರೆ.

ಮಂಡ್ಯದಲ್ಲಿ ಹಿರಿಯ ನಟ ಅಂಬರೀಶ್ ಸ್ಪರ್ಧಿಸುತ್ತಾರಾ?, ಇಲ್ಲವಾ ಎಂಬುದು ಕುತೂಹಲ ಮೂಡಿಸಿದೆ. ಸ್ಪರ್ಧಿಸುವ ಕುರಿತಾಗಿ ಅವರು ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಅರ್ಜಿಯನ್ನೂ ಸಲ್ಲಿಸಿಲ್ಲ. ಆದರೆ, ಸ್ಪರ್ಧಿಸಲೇಬೇಕೆಂದು ಅವರ ಬೆಂಬಲಿಗರು, ಅಭಿಮಾನಿಗಳು ಒತ್ತಡ ಹೇರಿದ್ದಾರೆ.

ಬೆಂಬಲಿಗರೊಂದಿಗೆ ಇಂದು ಸಭೆ ನಡೆಸಿದ ಅಂಬರೀಶ್ ಏಪ್ರಿಲ್ 2 ರಂದು ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಸಿನಿಮಾ ಮತ್ತು ರಾಜಕೀಯ ಕ್ಷೇತ್ರ ನನಗೆ ಎಲ್ಲವನ್ನೂ ಕೊಟ್ಟಿದೆ. ಎರಡೂ ಕ್ಷೇತ್ರಗಳಲ್ಲಿ ಸೋಲು, ಗೆಲುವನ್ನು ಕಂಡಿದ್ದೇನೆ. ಎಲ್ಲವನ್ನು ಸಹಜವಾಗಿ ಸ್ವೀಕರಿಸಿದ್ದೇನೆ. ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಇನ್ನೂ ತೀರ್ಮಾನ ಮಾಡಿಲ್ಲ. ಏಪ್ರಿಲ್ 2 ರಂದು ಸ್ಪರ್ಧಿಸಬೇಕೇ? ಬೇಡವೇ ಎಂಬುದರ ಕುರಿತು ಬೆಂಬಲಿಗರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಅವರು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...