alex Certify
ಕನ್ನಡ ದುನಿಯಾ       Mobile App
       

Kannada Duniya

‘ರಮ್ಯಾ ಸ್ಪರ್ಧಿಸಿದ್ರೂ ನಾನು ಅಭ್ಯರ್ಥಿಯಾಗ್ತೇನೆ’

ಮಂಡ್ಯ: ಮುಂಬರುವ ಚುನಾವಣೆಯಲ್ಲಿ ಮಂಡ್ಯದಲ್ಲಿ ನಾನು ಸ್ಪರ್ಧೆ ಮಾಡುವುದು ನಿಶ್ಚಿತ. ರಮ್ಯಾ ಸ್ಪರ್ಧಿಸಿದ್ರೂ ನಾನು ಸ್ಪರ್ಧಿಸುತ್ತೇನೆ. ನಾನು ಆಕಾಂಕ್ಷಿಯಲ್ಲ. ಮಂಡ್ಯದಲ್ಲಿ ನಾನೇ ಬಾಸು, ನಾನೇ ಅಭ್ಯರ್ಥಿ ಎಂದು ಮಾಜಿ ಸಚಿವ ಅಂಬರೀಶ್ ಹೇಳಿದ್ದಾರೆ.

ಯಾರೆ ಸ್ಪರ್ಧಿಸಿದ್ರೂ ಮಂಡ್ಯದಲ್ಲಿ ನಾನು ಸ್ಪರ್ಧೆ ಮಾಡುವೆ. ಬೇರೆ ಪಕ್ಷಕ್ಕೆ ಹೋಗುವುದಿಲ್ಲ. ಪಕ್ಷ ಯಾರಿಗೆ ಟಿಕೆಟ್ ಕೊಡಲಿ, ಯಾರಾದರೂ ಸ್ಪರ್ಧೆ ಮಾಡಲಿ. ನಾನಂತೂ ಚುನಾವಣೆಯಲ್ಲಿ ಸ್ಪರ್ಧಿಸುವೆ. ನನ್ನ ಆರೋಗ್ಯದ ಬಗ್ಗೆ ಕೆಲವರು ಮಾತನಾಡುತ್ತಾರೆ. ಮುಂದೆ ಅವರಿಗೂ ಅದೇ ರೀತಿ ಹುಷಾರಿರುವುದಿಲ್ಲ ಎಂಬುದನ್ನು ಮರೆತುಬಿಟ್ಟಿದ್ದಾರೆ ಎಂದು ಹೇಳಿದ್ದಾರೆ.

ನಾನು ಆರೋಗ್ಯವಾಗಿದ್ದೇನೆ. ಮಂಡ್ಯದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಅವರು ಮದ್ದೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...